Breaking News

ಎಂಎಲ್ಸಿ ಇಲೆಕ್ಷನ್, ಅಧಿಕಾರಿಗಳಿಗೆ ಬೆಳಗಾವಿಯಲ್ಲಿ ಟ್ರೇನಿಂಗ್…!!

ಬೆಳಗಾವಿ, – ವಿಧಾನ ಪರಿಷತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮತಗಟ್ಟೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನ ನಡೆಯುವಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಜೂ.3) ನಡೆದ ಕರ್ನಾಟಕ ವಾಯುವ್ಯ ಪದವೀಧರ ಹಾಗೂ ವಾಯುವ್ಯ ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2022 ರ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮತಗಟ್ಟೆಯಲ್ಲಿ ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು. ಯಾವುದೇ ತೊಂದರೆ ಹಾಗೂ ಗೊಂದಲಕ್ಕೆ ಒಳಗಾಗದೆ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್, ಚುನಾವಣೆ ಕರ್ತವ್ಯಕ್ಕೆ ನೀಡಿದ ಸಲಕರಣೆಗಳ ಕುರಿತು ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಬ್ಯಾಲೆಟ್ ಬಾಕ್ಸ್ ಸಿಲ್ ಹಾಕುವಾಗ ಅಭ್ಯರ್ಥಿ ಪರ ಏಜೆಂಟ್ ಅಥವಾ ಪ್ರತಿನಿಧಿಗಳ ರುಜು ಹಾಕಿಸಿಕೊಳ್ಳಬೇಕು. ಮತದಾನ ಪೂರ್ವದಲ್ಲಿ ಉಮೇದುವಾರ/ ಏಜೆಂಟ್ ಗಳಿಗೆ ಮತದಾನದ ರಹಸ್ಯ ಕಾಪಾಡಲು ಎಚ್ಚರಿಕೆ ನೀಡಬೇಕು ಎಂದು ಹೇಳಿದರು.

ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸರಿಯಾದ ಸಮಯಕ್ಕೆ ಮತದಾನನಡೆಸಬೇಕು. ಚುನಾವಣಾ ಕರ್ತವ್ಯಕ್ಕೆ ನೀಡಿದ ಸಾಮಗ್ರಿಗಳನ್ನು ಪರಿಶೀಲನಾ ಪಟ್ಟಿಯ ಪ್ರಕಾರ ಸರಿಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್ ಮಾರ್ಗಸೂಚಿಗಳ ಪಾಲನೆಗೆ ಸೂಚನೆ:

ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಮತದಾರರು ಪಾಲಿಸುವಂತೆ ಮತಗಟ್ಟೆ ಅಧಿಕಾರಿಗಳು ತಿಳಿಸಬೇಕು. ಕುರುಡ, ದುರ್ಬಲ ಮತ್ತು ವಿಕಲಚೇತನ ಮತದಾರರಿಗೆ ಸಹಾಯಕರನ್ನು ಬಳಸಲು ಅವಕಾಶ ಕಲ್ಪಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆ ಬೆಳಗಾವಿ, ಬಾಗಲಕೋಟ ಹಾಗೂ ಬಿಜಾಪುರ ಜಿಲ್ಲೆಯಲ್ಲಿ ನಡೆಯಲಿದೆ. ಚುನಾವಣೆ ಕರ್ತವ್ಯ ನಿರ್ವಹಿಸುವಾಗ ಯಾವುದೇ ತೊಂದರೆ ಎದುರಾದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ತರಬೇತುದಾರ ಎನ್. ವ್ಹಿ ಶಿರಗಾಂವಕರ ಅವರು ತಿಳಿಸಿದರು.

ಚುನಾವಣೆಯ ಎಲ್ಲ ಹಂತದಲ್ಲೂ ಮೈಕ್ರೋ ಅಬ್ಸರ್ವರ್ ಅವರ ಪಾತ್ರ ಮಹತ್ವದಾಗಿದೆ ಅವರು ಬಹಳ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು.
ಯಾವುದೇ ಮಾತಾದರ ನಿಯಮ ಉಲ್ಲಂಘನೆ ಮಾಡಿದರೆ ತಕ್ಷಣ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಹೇಳಿದರು.

ಮೊಬೈಲ್ ನಿಷೇಧ:

ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಮತಗಟ್ಟೆಯಲ್ಲಿ ನಿಷೇಧಿಸಿದೆ. ಮತದಾರರು ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಮತಗಟ್ಟೆ ಪ್ರವೇಶಿಸದಂತೆ ಮತಗಟ್ಟೆ ಅಧಿಕಾರಿಗಳು ಸೂಚಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮತದಾನ ಗೌಪ್ಯತೆ ಕಾಪಾಡಲು ಸೂಚನೆ:

ಮತದಾನ ಮುಕ್ತಾಯದ ನಂತರ ದಾಖಲಾದ ಮತಗಳ ಲೆಕ್ಕ ತಯಾರಿಸಬೇಕು ಹಾಗೂ ಮತದಾನದ ಗೌಪ್ಯತೆ ಕಾಪಾಡಿ ಚುನಾವಣಾ ನಿಯಮ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಮತದಾನದ ಗೌಪ್ಯತೆ ಕಾಪಡದ ಮತದಾರರ ಮತ ರದ್ದು ಪಡಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮತ ಚಲಾಯಿಸಲು ಮತಗಟ್ಟೆ ಪ್ರವೇಶಕ್ಕೆ ಒಬ್ಬ ಮತದಾರನಿಗೆ ಮಾತ್ರ ಅವಕಾಶ ಇರಲಿದೆ. ಏಕ ಕಾಲದಲ್ಲಿ ಒಬ್ಬ ಮತದಾರ ಹೊರತುಪಡಿಸಿ ಯಾರಿಗೂ ಅವಕಾಶ ಇರುವುದಿಲ್ಲ ಹಾಗೂ ಗುರುತಿನ ಚೀಟಿ ಪರಿಶೀಲಿಸಿ ಸರಿಯಾದ ವ್ಯಕ್ತಿ ಎಂದು ಖಾತ್ರಿಯಾದ ಬಳಿಕ ಮತದಾನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಎನ್. ವ್ಹಿ ಶಿರಗಾಂವಕರ ಅವರು ತರಬೇತಿಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್ ಹೆ.ವಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಬಿಮ್ಸ್ ಸಿಇಓ ಸೈದಾ ಬಳ್ಳಾರಿ ಉಪಸ್ಥಿತರಿದ್ದರು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆಯ ಅಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *