ವಿರೀತ ಮಳೆಯಿಂದಾಗಿ ನಿನ್ನೆ ಮದ್ಯರಾತ್ರಿ ಯುವಕನೊಬ್ಬ ಮನೆಯ ಗೋಡೆ ಕುಸಿದು ಮೃತಪಟ್ಟಿದ್ದ,ಇಂದು ಬೆಳಗ್ಗೆ ಖಾನಾಪೂರ ತಹಶಿಲ್ದಾರರಿಂದ ವರದಿ ಪಡೆದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ,ವರದಿ ಪಡೆದ ಕೆಲವೇ ಗಂಟೆಗಳಲ್ಲಿ ಮೃತ ಯುವಕನ ಕುಟುಂಬಸ್ಥರ ಖಾತೆಗೆ ಐದು ಲಕ್ಷ ರೂ ಪರಿಹಾರದ ಹಣ,ಜಮಾ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ, : ಖಾನಾಪುರ ತಾಲ್ಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಬಿದ್ದು ಮೃತಪಟ್ಟಿರುವ ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಅವರ ವಾರಸುದಾರರಿಗೆ ತಕ್ಷಣವೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಆರ್.ಟಿ.ಜಿ.ಎಸ್. ಮೂಲಕ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಮೃತ ಬಾಲಕನ ತಂದೆ ಧರಣೇಂದ್ರ ಪಾಶೆಟ್ಟಿ ಇವರ ಬ್ಯಾಂಕ್ ಖಾತೆಗೆ ಪರಿಹಾರ ಧನವನ್ನು ಖಾನಾಪುರ ತಹಶೀಲ್ದಾರರ ಪಿ.ಡಿ. ಖಾತೆಯಿಂದ ಜಮಾ ಮಾಡಲಾಗಿರುತ್ತದೆ.
ದುರಂತದ ಕುರಿತು ವರದಿಯನ್ನು ಪಡೆದುಕೊಂಡ ಕೆಲವೇ ಗಂಟೆಗಳಲ್ಲಿ ಮೃತರ ವಾರಸುದಾರರಿಗೆ ಪರಿಹಾರಧನವನ್ನು ನೀಡುವ ಮೂಲಕ ಜಿಲ್ಲಾಡಳಿತವು ಅತ್ಯಂತ ತ್ವರಿತವಾಗಿ ಸ್ಪಂದಿಸಿರುತ್ತದೆ.
****