ಬೆಳಗಾವಿಯಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿರುವುದರಿಂದ ಅಂತಹ ಕುಟುಂಬಗಳಿಗೆ ನಗರದ ಮಂಡೋಳಿ ರಸ್ತೆಯ ಕೈವಲ್ಯ ಯೋಗ ಮಂದಿರದಲ್ಲಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಈ ಕಾಳಜಿ ಕೇಂದ್ರಕ್ಕೆ ಸೋಮವಾರ ರಾತ್ರಿಯೇ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಕಾಳಜಿ ಕೇಂದ್ರದಲ್ಲಿ ಹದಿನೈದು ಜನರು ಆಶ್ರಯ ಪಡೆದುಕೊಂಡಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ.
ಮಹಿಳೆಯರು ಮತ್ತು ಮಕ್ಕಳು ಇರುವುದರಿಂದ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮನೆಗೆ ನೀರು ನುಗ್ಗಿರುವ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗಿದೆ. ಕೆಲವು ಕುಟುಂಬಗಳಿಗೆ ಸಂಬಂಧಿಸಿದಂತೆ ದಾಖಲೆಗಳು ದೊರಕದಿರುವುದರಿಂದ ಪರಿಹಾರ ವಿಳಂಬವಾಗಿದೆ. ಅವರಿಗೂ ನಾಳೆಯೇ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ