ಬೆಳಗಾವಿಯಲ್ಲಿ ಕೇವಲ 24 ಗಂಟೆಯಲ್ಲಿ ಗುಡ್ ಜಾಬ್….!!

24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ; ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, – ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ‌ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು.

ತಮ್ಮ ಸಹೋದರ ಸೇವೆಯಲ್ಲಿರುವಾಗ ನಿಧನ ಹೊಂದಿರುವುದರಿಂದ ಕುಟುಂಬ ನಿರ್ವಹಣೆಗಾಗಿ ತಮಗೆ ಅನುಕಂಪ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಬಸವರಾಜ‌‌‌ ಮಹಾದೇವ ಬಾದುಲೆ ಅವರು ಅರ್ಜಿ ಸಲ್ಲಿಸಿದ್ದರು.

ಸದರಿ ಅರ್ಜಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮೃತ ಸಚಿನ್ ಬಾದುಲೆ ಅವರ ಅವಲಂಬಿತ ಸಹೋದರ ಬಸವರಾಜ ಮಹಾದೇವ ಬಾದುಲೆ ಅವರನ್ನು ಕೇವಲ 24 ಗಂಟೆಗಳ ಅವಧಿಯಲ್ಲಿ ಗ್ರುಪ್ “ಸಿ” ಹುದ್ದೆಗೆ ನೇರ ನೇಮಕಾತಿ ಮಾಡುವ ಮೂಲಕ ಮಾನವಿಯತೆ ಮೆರೆದಿದ್ದಾರೆ.

ಬಿ.ಎ. ಪದವೀಧರರಾಗಿರುವ ಬಸವರಾಜ ಮಹಾದೇವ ಬಾದುಲೆ ಅವರನ್ನು ಪ್ರಥಮ ದರ್ಜೆ ಸಹಾಯಕರನ್ನಾಗಿ ನೇರ ನೇಮಕ‌ ಮಾಡಿ ಚಿಕ್ಕೋಡಿ ತಹಶಿಲ್ದಾರ ಕಚೇರಿಯಲ್ಲಿ ಖಾಲಿ ಇರುವ ಪ್ರ.ದ.ಸ. ಹುದ್ದೆಗೆ ನಿಯುಕ್ತಿಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿರುತ್ತಾರೆ.

ಕಚೇರಿಯ ಸಿಬ್ಬಂದಿಯೊಬ್ಬರು ಅಕಾಲಿಕವಾಗಿ ನಿಧನ ಹೊಂದಿರುವುದರಿಂದ ಅವರ ಕುಟುಂಬವು ಸಂಕಷ್ಟಕ್ಕೆ ಸಿಲುಕಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಕೂಡಲೇ ನೇರ ನೇಮಕಾತಿ ಆದೇಶ ನೀಡುವ ಮೂಲಕ ಸಿಬ್ಬಂದಿಯ ಕುಟುಂಬಕ್ಕೆ ನೆರವಾಗಿರುತ್ತಾರೆ.
***

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *