Breaking News

ಆತ್ಮಹತ್ಯೆಗೆ ಯತ್ನ; ಮಹಿಳೆ, ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ

ಬೆಳಗಾವಿ,- ಕೌಟುಂಬಿಕ ಸಮಸ್ಯೆಯ ಕಾರಣಕ್ಕೆ ಮಹಿಳೆಯೊಬ್ಬರು ಮೂರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರಿನ ಬಸ್ ತಂಗುದಾಣದಲ್ಲಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ‌. ತಾಯಿ ಮತ್ತು ಮಕ್ಕಳು ಚೇತರಿಸಿಕೊಂಡಿದ್ದು, ಯಾವುದೇ ಅಪಾಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಅವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಆದರೆ ಈ ಘಟನೆಯು ಜಿಲ್ಲಾಧಿಕಾರಿ ಕಚೇರಿಯ ಎದುರಿಗೆ ಹೊರಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ನಡೆದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯುತ್ತಮ ಚಿಕಿತ್ಸೆ ನೀಡಲು ಸೂಚನೆ:

ಆದಾಗ್ಯೂ ಮಾಧ್ಯಮಗಳ ವರದಿ ಗಮನಕ್ಕೆ ಬಂದ ತಕ್ಷಣವೇ ಜಿಲ್ಲಾ ಸರ್ಜನ್ ಜತೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮಹಿಳೆ ಮತ್ತು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅತ್ಯುತ್ತಮ ಚಿಕಿತ್ಸೆ ನೀಡಬೇಕು ಎಂದು ಸೂಚನೆಯನ್ನು ನೀಡಿದರು.
ಸಂಪೂರ್ಣ ಆರೋಗ್ಯ ಸುಧಾರಣೆಯಾಗುವವರೆಗೆ ಆಸ್ಪತ್ರೆಯಲ್ಲಿ ಇರಿಸಿಕೊಂಡು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿರುತ್ತಾರೆ.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *