Breaking News

ಬೆಳಗಾವಿ ಉದ್ಯೋಗ ಮೇಳಕ್ಕೆ 200 ಕಂಪನಿಗಳು, 10 ಸಾವಿರ ಉದ್ಯೋಗದಾತರು ಬರುವ ನಿರೀಕ್ಷೆ- ಡಿಸಿ

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕ, ಯುವತಿಯರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸುವ ಮಹತ್ತರ ಉದ್ದೇಶದಿಂದ ಎರಡು ದಿನಗಳ ಬೃಹತ್ಪ್ರಾದೇಶಿಕ ಉದ್ಯೋಗ ಮೇಳವನ್ನು ಬೆಳಗಾವಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಲೇಜ್ ಆವರಣದಲ್ಲಿ ಫೆ.28 ಶುಕ್ರವಾರ ಹಾಗೂ 29 ಶನಿವಾರ ಉದ್ಯೋಗ ಮೇಳ ನಡೆಯಲಿದೆ.
ಬೆಳಗಾವಿ, ಜಿಲ್ಲಾಡಳಿತ ಬೆಳಗಾವಿ, ಧಾರವಾಡ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದರು.

ಐಟಿ-ಬಿಟಿ, ಆಟೋಮೊಬೈಲ್, ಮೆಕ್ಯಾನಿಕಲ್, ಮಾರ್ಕೆಟಿಂಗ್, ಸೇಲ್ಸ್ ಆ್ಯಂಡ್ ರಿಟೇಲ್, ಟೆಲಿಕಾಂ, ಬಿಪಿಓ, ಟೆಕ್ಸಟೈಲ್,ಬ್ಯಾಂಕಿಂಗ್, ಫೈನಾನ್ಸ್, ಇನ್ನೂರ, ಹಾಸ್ಪಿಟಲ್, ಫಾರ್ಮಾಸಿಟಿಕಲ್, ಹೆಲ್ತ್ ಕೇರ್, ಮ್ಯಾನುಫ್ಯಾಕ್ಚರಿಂಗ್, ಟ್ರಾನ್ಸಪೋರ್ಟ್, ಹಾಸಿಟ್ಯಾಲಿಟಿ, ಹೋಂ ನರ್ಸಿಂಗ್, ಆಹಾರ ಸಂಸ್ಕರಣೆ, ಗಾರ್ಮೆಂಟ್ಸ್, ಸೆಕ್ಯೂರಿಟಿ ಸೇರಿದಂತೆ ವಿವಿಧ ಕಂಪನಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ ಎಂದರು.

ಎಸ್.ಎಸ್.ಎಲ್.ಸಿ. ಪಾಸ್, ಫೇಲ್, ಪಿ.ಯು.ಸಿ., ಐಟಿಐ, ಡಿಪ್ಲೋಮಾ , ಯಾವುದೇ ಪದವಿ, ಎಂ.ಬಿ.ಎ., ಸ್ನಾತಕೋತ್ತರಪದವಿ ವಿದ್ಯಾರ್ಹತೆ ಹೊಂದಿದ ಮತ್ತು ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕೂಡಲೇ ಕೆಲಸಕ್ಕೆ ಸೇರ ಬಯಸುವ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದರು.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ 18 ವರ್ಷ ಮೇಲ್ಪಟ್ಟು 35 ವರ್ಷದೊಳಗಿನ ವಯೋಮಾನದ ಪುರುಷರು,ಮಹಿಳೆಯರು ಹಾಗೂ ವಿಶೇಷಚೇತನರು ಭಾಗವಹಿಸಬಹುದಾಗಿದೆ ಎಂದು ಹೇಳಿದರು.

ಎರಡು ದಿನಗಳ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗದಾತರು ಮತ್ತು
ಉದ್ಯೋಕಾಂಕ್ಷಿಗಳ ನೋಂದಣಿಗೆ ಅನುಕೂಲವಾಗುವಂತೆ ಸಾಮಾಜಿಕ
ಜಾಲತಾಣ www.belagaviudyogamela.in ನಲ್ಲಿ ಅರ್ಜಿ ಸಲ್ಲಿಸ ಬಹದು ಎಂದರು‌
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಇತ್ತೀಚೆಗೆ ಈ ಜಾಲತಾಣವನ್ನು ಅನಾವರಣಗೊಳಿಸಿದ್ದಾರೆ‌. ಈಗಾಗಲೇ 150 ಉದ್ಯೋಗದಾತ ಕಂಪನಿಗಳು ಮತ್ತು ಎರಡೂ ಜಿಲ್ಲೆಗಳ 8 ಸಾವಿರಕ್ಕೂ ಅಧಿಕ ಉದ್ಯೋಗಾಂಕ್ಷಿಗಳು ಹೆಸರು ನೋಂದಣಿ ಮಾಡಿಕೊಂಡಿರುತ್ತಾರೆ. ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು
ನೋಂದಾಯಿಸಲು ಇನ್ನೂ ಕಾಲಾವಕಾಶವಿರುತ್ತದೆ. ಆಸಕ್ತರು, ತಮ್ಮ ಹೆಸರು
ನೋಂದಣಿಗಾಗಿ www.belagaviudyogamela.in ಲಾಗಿನ್ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ 9449702768 ಅಥವಾ 7892924199 ಮೊಬೈಲ್ ಸಂಖ್ಯೆಗಳನ್ನು
ಸಂಪರ್ಕಿಸಬಹುದು. ಜಾಲತಾಣದಲ್ಲಿ ಹೆಸರು ನೋಂದಾಯಿಸಿಕೊಂಡಿರುವವರು ಬೆಳಿಗ್ಗೆ 8 ಗಂಟೆಗೆ ಸ್ಥಳದಲ್ಲಿ ಹಾಜರಿದ್ದು, ಪ್ರವೇಶಪತ್ರ
ಪಡೆಯತಕ್ಕದ್ದು.ನಿರುದ್ಯೋಗಿಗಳಿಗೆ ಅವರ ವಿದ್ಯಾರ್ಹತೆಗೆ ತಕ್ಕಂತೆ ಸೂಕ್ತ ಉದ್ಯೋಗಗಳನ್ನು ಕಲ್ಪಿಸಬೇಕು ಎಂಬ ಉದ್ದೇಶದಿಂದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಉದ್ಯೋಕಾಂಕ್ಷಿಗಳ ಅನುಕೂಲಕ್ಕಾಗಿ ಪ್ರಾದೇಶಿಕ
ಉದ್ಯೋಗಮೇಳವನ್ನು ಆಯೋಜಿಸಲಾಗಿದೆ ಎಂದರು.

ಎರಡೂ ಜಿಲ್ಲೆಗಳ ನಿರುದ್ಯೋಗ ಯುವಕ ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಉದ್ಯೋಗಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಡಿಸಿಪಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಗುರುನಾಥ ಕಡಬೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ಮಹಾರಾಷ್ಟ್ರದ ನಾಗಪೂರದಲ್ಲಿ ಬೆಳಗಾವಿ ಗ್ರಾಮೀಣದ ನಾಗೇಶ್…!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಮುಖಂಡ,ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮುನ್ನೋಳಕರ ಕಾಲಿಗೆ ಚಕ್ರ ಕಟ್ಟಕೊಂಡು …

Leave a Reply

Your email address will not be published. Required fields are marked *