ಬೆಳಗಾವಿ- ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಜಿಯಾವುಲ್ಲಾ ಅವರು ಇಂದು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು
ಚಿಕ್ಕೋಡಿ ಉಪ ವಿಭಾಗಾಧಿಕಾರಿಯಾಗಿ ತಮ್ಮ ಸೇವಾ ಅವಧಿಯ ಆರಂಭದಲ್ಲಿ ಕಾರ್ಯ ನಿರ್ವಹಿಸಿದ ಅವರು ಬೆಳಗಾವಿ ಜಿಲ್ಲೆಯ ಬಗ್ಗೆ ಅನುಭವ ಹೊಂದಿದ್ದಾರೆ ಮಂಡ್ಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಜಿಯಾವುಲ್ಲಾ ಅವರನ್ನು ಜಯರಾಮ ಅವರ ವರ್ಗಾವಣೆಯಾದ ಬಳಿಕ ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ಬುಧವಾರ ಆದೇಶ ಹೊರಡಿಸಿತ್ತು
ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರನ್ನು ಪ್ರಭಾರಿ ಜಿಲ್ಲಾಧಿಕಾರಿ ರಾಮಚಂದ್ರನ ಅವರು ಅಧಿಕಾರ ಹಸ್ತಾಂತರ ಮಾಡಿದರು
ವಿವಿಧ ಇಲಾಖೆಗಳ ಅಧಿಕಾರಿಗಳು ಜನ ಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು
ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಜಿಯಾವುಲ್ಲಾ ಸರ್ಕಾರದಲ್ಲಿ ಇಪ್ಪತ್ತು ವರ್ಷ ಸೇವಾ ಅನುಭವ ಜೊತೆಗೆ ಮಂಡ್ಯ ಜಿಲ್ಲೆಯಲ್ಲಿ ಎರಡು ವರ್ಷ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ ಅವೆಲ್ಲವನ್ನು ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸುವ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಹೇಳಿದರು
1999 ರಲ್ಲಿ ಮೂರು ವರ್ಷ ಉಪ ವಿಭಾಗಾಧಿಕಾರಿಯಾಗಿ ಚಿಕ್ಕೋಡಿ ಯಲ್ಲಿ ಕಾರ್ಯ ನಿರ್ವಹಿಸಿದ್ದು ಗಡಿಭಾಗ ಮತ್ತು ಬೆಳಗಾವಿಯಲ್ಲಿನ ಭಾಷಾ ಸಮಸ್ಯೆ ಬಗ್ಗೆ ನನಗೆ ಅರಿವಿದೆ, ನನ್ನ ಇತಿ,ಮಿತಿಯಲ್ಲಿ ಪರಿಸ್ಥಿತಿ ತಿಗೆ ಅನುಗುಣವಾಗಿ ಎಲ್ಲವನ್ನು ಸರಿ ಪಡಿಸುವ ವಿಶ್ವಾಸ ಇದೆ ಎಂದು ತಮ್ಮ ಅಭಿಪ್ರಾಯ ವ್ಯೆಕ್ತಪಡಿಸಿದರು
ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮತ್ತು ಭಾಷಾ ಸಮಸ್ಯೆಯ ಬಗ್ಗೆ ಕೈಗೊಂಡ ಕ್ರಮಗಳನ್ನು ಮುಂದುವರೆಸಿಕೊಂಡು ಹೋಗುವದಾಗಿ ಹೇಳಿದ ಅವರು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವದಾಗಿ ಹೇಳಿದರು