ಹೊಸದಾಗಿ ಬೆಳಗಾವಿ ಡಿಸಿ ಕಚೇರಿ ನಿರ್ಮಿಸಲು ನಿರ್ಧಾರ.

ಬೆಳಗಾವಿ ನಗರದಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಡಿಪಿ ಸಭೆಯಲ್ಲಿ ಮಾಹಿತಿಯನ್ನು ನೀಡಿದರು.

ಸದ್ಯಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಭ್ಯವಿರುವ ಒಟ್ಟಾರೆ 9 ಎಕರೆ ಜಾಗೆಯಲ್ಲಿ ಎರಡು ಎಕರೆ ಜಾಗೆಯನ್ನು ಬಳಸಿಕೊಂಡು ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸಲು ಉದ್ಧೇಶಿಸಲಾಗಿದೆ.
ಉಳಿದ ಜಾಗೆಯಲ್ಲಿ ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ಈ ಯೋಜನೆ ಕುರಿತು ಜನ ಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಬೇಕೆಂದು ತಿಳಿಸಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *