Breaking News

P O P ಗಣೇಶ ಮೂರ್ತಿಗಳ ನಿಷೇಧ ಡಿಸಿ ಜಿಯಾವುಲ್ಲಾ ಖಡಕ್ ಆದೇಶ

ಬೆಳಗಾವಿ: ಗಣೇಶ ಚತುರ್ಥಿ ನಿಮಿತ್ಯ ಪಿಓಪಿ ಗಣೇಶ ಮೂರ್ತಿಗಳನ್ನು (ಬಣ್ಣದ ಗಣೇಶ ಮೂರ್ತಿಗಳನ್ನು) ತಯಾರಿಸುವಂತಿಲ್ಲ. ಈ ಬಗ್ಗೆ ತಯಾರಕರಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅದಾಗ್ಯೂ ತಯಾರಿಸುವುದಕ್ಕೆ ಮುಂದಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆಯನ್ನು ತಡೆಗಟ್ಟುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪಿಓಪಿ ಮೂರ್ತಿಗಳ ಬಳಕೆಯನ್ನು ನಿಲ್ಲಿಸಬೇಕು. ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ನಿರ್ಮಿಸಿ, ಪ್ರತಿಷ್ಠಾಪಿಸಬೇಕೆಂದು ತಿಳಿಸಿದರು.
ಪಿಓಪಿ ಗಣೇಶ ಮೂರ್ತಿಗಳನ್ನು ನಿರ್ಮಿಸುವ ಸ್ಥಳಗಳನ್ನು ಗುರುತಿಸಿ, ಅಧಿಕಾರಿಗಳು ಅಂತಹ ಸ್ಥಳಗಳಿಗೆ ತೆರಳಿ ತಯಾರಿಕರಿಗೆ ತಿಳಿಹೇಳಿ, ಎಚ್ಚರಿಕೆ ನೀಡಬೇಕು. ಅನಧಿಕೃತವಾಗಿ ಪಿಓಪಿ ಗಣೇಶ ಮೂರ್ತಿಗಳನ್ನು ನಿರ್ಮಿಸುವವರ ಮೇಲೆ ಯಾವುದೇ ಮುಲಾಜಿಲ್ಲದೇ ಪ್ರಕರಣ ದಾಖಲಿಸಿ, ಕಟ್ಟನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಮಹಾನಗರ ಪಾಲಿಕೆ ಅಧಿಕಾರಿಗಳು ತಂಡಗಳನ್ನು ರಚಿಸಿ, ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಗಣೇಶ ಚತುರ್ಥಿಗೆ ಇನ್ನೂ ಸಮಯವಿರುವುದ್ದರಿಂದ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ನಿಲ್ಲಿಸಬೇಕೆಂದು ತಯಾರಿಕರಿಗೆ ತಿಳಿ ಹೇಳಬೇಕು. ಆದರಿಂದ ಆಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.

ಪೊಲೀಸ್ ಆಯುಕ್ತರಾದ ಡಾ. ಡಿ.ಸಿ. ರಾಜಪ್ಪ ಅವರು ಮಾತನಾಡಿ, ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವ ಸ್ಥಳಗಳನ್ನು ಗುರುತಿಸಿ ಇದೇ ಮಂಗಳವಾರದಿಂದಲೇ (ಆ.21) ಆ ಸ್ಥಳಗಳಿಗೆ ಹಿರಿಯ ಪೊಲೀಸ್ ಆಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂರ್ತಿಗಳನ್ನು ತಯಾರಿಸುವುದು ಕಂಡು ಬಂದರೆ ತಯಾರಕರಿಗೆ ಪಾಸ್ಟರ್ ಆಪ್ ಪ್ಯಾರಿಸ್ ಮೂರ್ತಿಗಳನ್ನು ತಯಾರಿಸಬಾರದರು ಹಾಗೂ ಇನ್ನು ಮುಂದೆ ತಯಾರಿಸಲು ಜನರಿಂದ ಆರ್ಡರ್ ಪಡೆಯಬಾರದು ಎಂದು ಸೂಚಿಸಬೇಕು. ಈಗಾಗಲೇ ತಯಾರಿಸಿದ ಪಿಓಪಿ ಮೂರ್ತಿಗಳು ಇದ್ದರೆ ಅವುಗಳನ್ನು ವಶಪಡಿಸಿಕೊಂಡು ಒಂದು ಸ್ಥಳದಲ್ಲಿ ಕೂಡಿಡಬೇಕೆಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ ಅವರು ಮಾತನಾಡಿ, ಈಗಾಗಲೇ ಜಿಲ್ಲಾದ್ಯಂತ ಎಲ್ಲ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್‍ಗಳಿಗೆ ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವುದು ಕಂಡುಬಂದರೆ ತಡೆಗಟ್ಟುವಂತೆ ಸೂಚಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳ ಸಹಾಯ ಪಡೆದು ಮೂರ್ತಿಗಳನ್ನು ತಯಾರಿಸುವುದನ್ನು ನಿಲ್ಲಿಸಬೇಕೆಂದು ತಿಳಿಸಿದರು.

ಮಹಾರಾಷ್ಟ್ರದಿಂದ ಜಿಲ್ಲೆಯ ನಿಪ್ಪಾಣಿ ಹಾಗೂ ಇನ್ನಿತರ ಕಡೆ ಪಿಓಪಿ ಮೂರ್ತಿಗಳು ಅಮದಾಗುವುದರಿಂದ ಆ ಭಾಗದಲ್ಲಿ ಚೆಕ್‍ಪೋಸ್ಟ್ ನಿರ್ಮಿಸಿ ಅವುಗಳನ್ನು ವಶಪಡಿಸಿಕೊಳ್ಳಲಾಗುವುದೆಂದು ಸುಧೀರ್‍ಕುಮಾರ ರೆಡ್ಡಿ ಅವರು ಹೇಳಿದರು

ಚಿಕ್ಕೋಡಿ ಪರಿಸರ ಅಧಿಕಾರಿ ಐ.ಎಚ್. ಜಗದೀಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಪ್ರವೀಣ ಬಾಗೇವಾಡಿ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ ಸೇರಿದಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *