ಬೆಳಗಾವಿ-ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಸೀಮಾ ಲಾಟಕರ್ ಇಂದು ಅಧಿಕಾರ ಸ್ವೀಕಾರ ಮಾಡಿದರು.
ಬೆಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ಆಗಿ ಕಾರ್ಯ ನಿರ್ವಹಿಸಿರುವ ಸೀಮಾ ಲಾಠಟಕರ್ ಈಗ ಬೆಳಗಾವಿಯ ಡಿಸಿಪಿ ಆಗಿ ಸೇವೆ ಆರಂಭಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿ ಸೀಮಾ ಲಾಟಕರ್ ನಗರ ಪೊಲೀಸ್ ಆಯುಕ್ತ ಕೃಷ್ಣ ಭಟ ಅವರನ್ನು ಭೇಟಿ ಮಾಡಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಸೀಮಾ ಲಾಟಕರ್, ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ನಗರ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಹೇಳಿದರು.
ಈ ವೇಳೆಯಲ್ಲಿ ನಗರದ ಎಲ್ಲಾ ಎಸಿಪಿಗಳು ಮತ್ತು ವಿವಿಧ ಠಾಣೆಗಳ ಸಿಪಿಐ ಗಳು ಹಾಗೂ ಕ್ರೈಂ ಮತ್ತು ಸಂಚಾರಿ ವಿಭಾಗದ ಡಿಸಿಪಿ ಅಮರನಾಥ ರೆಡ್ಡಿ ಸೇರಿ ಅನೇಕರು ಲಾಟಕರ್ ಅವರನ್ನು ಬರ ಮಾಡಿಕೊಂಡರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ