Breaking News

ನಾಳೆಯಿಂದ ಬೆಳಗಾವಿ ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತ

ಬೆಳಗಾವಿಯಲ್ಲಿ ನಾಳೆಯಿಂದ ಲಾಕ್ ಡೌನ್,

ಬೆಳಗಾವಿ- ರಾಜ್ಯ ಸರ್ಕಾರದಿಂದ ಬೆಳಗಾವಿ ಜಿಲ್ಲೆ ಲಾಕ್‌ಡೌನ್‌ಗೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಸರ್ಕಾರಿ, ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ.

ಎಲ್ಲಾ ರೀತಿಯ ಸರ್ಕಾರಿ, ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳ್ಳಲಿದ್ದು 12 ಪ್ಲಸ್ ಒನ್ ಮತ್ತು ಹೆಚ್ಚಿನ ಸೀಟ್‌ಗಳಿರುವ ಎಲ್ಲಾ ವಾಹನಗಳ‌ ಸಂಚಾರ ಸ್ಥಗಿತಗೊಳ್ಳಲಿದೆ.

ಮಾರ್ಚ್ 31ರವರೆಗೆ ಬೆಳಗಾವಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಮುಂದುವರೆಯಲಿದ್ದುಅತ್ಯಾವಶ್ಯಕ ವಸ್ತುಗಳ ವ್ಯಾಪ್ತಿಯಲ್ಲಿ ಬರದ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಲಿವೆ.

ಕಿರಾಣಿ ಅಂಗಡಿ, ತರಕಾರಿ, ಹಾಲಿನ‌ ಡೈರಿ, ಪೆಟ್ರೋಲ್‌ ಬಂಕ್‌ ಮಾತ್ರ ಓಪನ್ ಮಾಡಲು ಅವಕಾಶವಿದ್ದು ಮಹಾರಾಷ್ಟ್ರದಲ್ಲಿ‌ ಕೊರೊನಾ‌ ಸೋಂಕಿತರ ಸಂಖ್ಯೆ 70ರ ಗಡಿ ದಾಟಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೂ ಹೈ ಅಲರ್ಟ್ ಮುಂದುವರೆಯಲಿದೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೈ ಅಲರ್ಟ್ ಮುಂದುವರೆದಿದ್ದು ಉಭಯ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲಿ ಸ್ಕ್ರೀನಿಂಗ್ ಮಾಡಲು
ಇನ್ಫಾರೆಡ್ ಥರ್ಮಾಮೀಟರ್ ಮೂಲಕ ತಪಾಸಣೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಿದೆ.

Check Also

ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂಈಎಸ್ ನಿಷೇಧದ ವಿಚಾರವೂ ಸೇರಲಿ- ಕರವೇ

ಬೆಳಗಾವಿ -ನಾಳೆಯಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ಕುರಿತು ಚರ್ಚೆಗೆ …

Leave a Reply

Your email address will not be published. Required fields are marked *