ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ.
ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು ಬೆಳಗಾವಿ ಜಿಲ್ಲಾಡಳಿತ ಮುಂದಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ಸರಪ್ರೈಸ್ ವಿಜಿಟ್ ಮಾಡಿ ಜಿಲ್ಲಾ ಆಸ್ಪತ್ರೆಯ ಚಿಕಿತ್ಸಾ ವ್ಯೆವಸ್ಥೆ ಪರಶೀಲನೆ ಮಾಡಿದ್ದಾರೆ ಭೀಮ್ಸ್ ನಲ್ಲಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.ಜಿಲ್ಲಾ ಆಸ್ಪತ್ರೆಯ ಓಪಿಡಿ ವಿಭಾಗವನ್ನು ಬೇರೆ ಯಾವ ಕಟ್ಟಡಕ್ಕೆ ಸ್ಥಳಾಂತರ ಮಾಡಬಹುದು ಎನ್ನುವದರ ಬಗ್ಗೆ ಕೂಡಲೇ ವರದಿ ನೀಡುವಂತೆ ಭೀಮ್ಸ್ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಬೆಳಗಾವಿಯ ಕೋವಿಡ್ ವಾರ್ಡಿನಲ್ಲಿ 116 ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದು,ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ 200 ಕ್ಕು ಹೆಚ್ಚು ಬೆಡ್ ಗಳನ್ನು ಕೋವಿಡ್ ಚಿಕಿತ್ಸೆಗೆ ಬಳಿಸಿಕೊಳ್ಳುತ್ತೇವೆ,ಓಪಿಡಿಯನ್ನು ಕೂಡಲೇ ಬೇರೆ ಕಡೆಗೆ ಸ್ಥಳಾಂತರ ಮಾಡುತ್ತೇವೆ ಎಂದು ಬೆಳಗಾವಿ ಡಿಸಿ ಮಾದ್ಯಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ನೂರಾರು ಹೊರರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯೆಗೂ ಸೊಂಕು ತಗಲಿದ ಕಾರಣ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂಧಿಗೆ ಆತಂಕ ಶುರುವಾಗಿದೆ
ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆಯವರೆಗೆ 465 ಸೊಂಕಿತರು ಪತ್ತೆಯಾಗಿದ್ದರು ಅದರಲ್ಲಿ 116 ಜನರಲ್ಲಿ ಸೊಂಕು ಆ್ಯಕ್ಟೀವ್ ಆಗಿದ್ದು ಅವರೆಲ್ಲರೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂಧಿಗಳು,ಜೀವದ ಹಂಗು ತೊರೆದು ನಿರ್ಭಿಡವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ