ಬೆಳಗಾವಿ
ಖಾಸಗಿ ವೈದ್ಯಕೀಯ ಕಾಯ್ದೆ ತಿದ್ದುಪಡಿ ವಿಧೇಯಕ ತರಲು ಹೊರಟಿದ್ದ ರಾಜ್ಯ ಸರ್ಕಾರದ ನೀತಿ ಖಂಡಿಸಿ ಬೆಳಗಾವಿ ಜಿಲ್ಲೆಯ ವೈದ್ಯರಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯಾದ್ಯಂತ ಖಾಸಗಿ ವೈದ್ಯರು ಬೆಂಗಳೂರಿನಲ್ಲಿ ಹಮ್ಮಿಕೊಂಡ ಪ್ರತಿಭಟನೆಗೆ ಬೆಳಗಾವಿ ವೈದ್ಯರಿಂದ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ನಗರ ಐ ಎಮ್ ಎ ಹಾಲ್ ನಿಂದ ಜಿಲ್ಲಾಧಿಕಾರ ಕಚೇರಿವರೆ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಕಾಯ್ದೆ ತಿದ್ದುಪಡಿ ಕೈ ಬಿಡಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ
ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಇನ್ನು ಜಿಲ್ಲೆಯ
ಆಸ್ಪತ್ರೆಯಲ್ಲಿನ ತುರ್ತು ನಿಗಾ ಘಟಕ ಎಂದಿನಂತೆ ಕರ್ಯ ನಿರ್ವಹಣೆ ಮಾಡುತ್ತಿವೆ. ಇದನ್ನ ಹೊರತು ಪಡಿಸಿ ಒಂದು ದಿನ ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ರು. ಇನ್ನ ಈ ಕಾಯ್ದೆ ಅವೈಜ್ಞಾನಿಕವಾಗಿದೆ ಇದನ್ನ ಕೈ ಬಿಡಬೇಕು. ಆಸ್ಪತ್ರೆಯಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಇಡಲಾಗುತ್ತದೆ ಇಲ್ಲಿ ಕಡಿಮೆ ವೆಚ್ಚ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಹೀಗಾಗಿ ಇದನ್ನ ಕೈ ಬಿಡಬೇಕು ಎಂದು ಒತ್ತಾಯ ಮಾಡಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ