ಬೆಳಗಾವಿ – ಗ್ರಾಮ ಪಂಚಾಯತಿ ಚುನಾವಣೆಗೆ ಮೊದಲ ಹಂತದ ಮತದಾನ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿದೆ.ಬೆಳಗಾವಿ ಪಕ್ಕದ ದೇಸೂರ ಗ್ರಾಮದ ಮತಗಟ್ಟೆಯಲ್ಲಿ ನಡೆಯಬಾರದ ಘಟನೆ ನಡೆದಿದೆ ಮತಗಟ್ಟೆಯಲ್ಲಿ ಚುನಾವಣೆಯ ಡ್ಯುಟಿಗೆ ನಿಯೋಜನೆಗೊಂಡ ಅಧಿಕಾರಿಯ ಬಳಿ ರಿವಾಲ್ವರ್ ಪತ್ತೆಯಾಗಿದೆ.
ಗ್ರಾಪಂ ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಬಳಿ ಪಿಸ್ತೂಲ್ ಪತ್ತೆಯಾಗಿದ್ದು, ಪೊಲೀಸರು ಪರೀಶಿಲನೆ ನಡೆಸುತ್ತಿದ್ದಾರೆ.
ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಮತಗಟ್ಟೆಗೆ ನಿಯೋಜನೆಯಾಗಿದ್ದ ಅಧಿಕಾರಿ ಬಳಿ ಲೋಡೆಡ್ ಇರುವ ಪಿಸ್ತೂಲ್ ಇರುವುದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಮತಗಟ್ಟೆ ಕೇಂದ್ರಕ್ಕೆ ತೆರಳಿದ ಹಿರಿಯ ಪೋಲಿಸ್ ಅಧಿಕಾರಿಗಳು ಪಿಸ್ತೂಲ್ ನಲ್ಲಿ ತುಂಬಲಾಗಿದ್ದ ಗುಂಡುಗಳನ್ನು ಹೊರಗೆ ತೆಗೆಯುವಂತೆ ತಿಳಿಸಿದ್ದಾರೆ.
ಅಲ್ಲದೇ ಚುನಾವಣೆ ಸಮಯದಲ್ಲಿ ಪೊಲೀಸ್ ಠಾಣೆಗೆ ಜಮಾ ಮಾಡಬೇಕಿದ್ದ ಪಿಸ್ತೂಲ್ ನ್ನು ಕರ್ತವ್ಯದ ಸಮಯದಲ್ಲಿ ತನ್ನೊಂದಿಗೆ ತರಲು ಕಾರಣವೇನು ಎಂಬುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೆ ಸೋಮವಾರ ರಾತ್ರಿಯೇ ದೇಸೂರ ಗ್ರಾಪಂನಲ್ಲಿ ಬ್ಯಾಲೇಡ್ ಪೇಪರ್ ಲೀಕ್ ಆಗಿದೆ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕರ್ತವ್ಯ ನಿರತ ಸಿಬ್ಬಂದಿಯ ಇಂಥ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಆಗಿದೆ ಎಂದು ಗ್ರಾಮದ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.