ಬೆಳಗಾವಿ- ರೈತರಿಗೆ ಸಮಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಅಧಿವೇಶನದ ಮೊದಲ ದಿನವಾದ ಸೋಮವಾರ ಬೆಳಗಾವಿಯಲ್ಲಿ ಬೃಹತ್ತ ಪ್ರತಿಭಟನೆ ನಡೆಸಲಿದೆ ಎಂದು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದ್ದಾರೆ
ಮಾದ್ಯಮಗಳ ಜೊತೆ ಮಾತನಾಡಿದ ಅವರು ಕಬ್ಬಿನ ಬೆಲೆ ನಿಗದಿ ಮಾಡಬೇಕು ಕಬ್ಬಿನ ಬಾಕಿ ಬಿಲ್ ಪಾವತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ರೈತರ ಸಾಲ ಮನ್ನಾ ಮಾಡಬೇಕು,ಕಳಸಾ ಬಂಡೂರಿ ಹಾಗು ಮಹಾದಾಯಿ ಸಮಸ್ಯೆಯನ್ನು ಇತ್ಯರ್ಥಪಡಿಸುವದು ಸೇರುದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಒತ್ತಾಯಿಸಲಿದ್ದಾರೆ
ಸೋಮವಾರ ಬೆಳಿಗ್ಗೆ ಸಾವಿರಾರು ಜನ ರೈತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸೇರಿ ವೀರ ರಾಣಿ ಕಿತ್ರೂರ ಚನ್ನಮ್ಮಾಜಿಯ ಪ್ರತಿಮೆಗೆ ಪುಷ್ಪ ಗೌರವ ಸಲ್ಲಿಸಿದ ಬಳಿಕ ಸುವರ್ಣ ವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಯುತ್ತದೆ ಎಂದು ಕೋಡಿಹಳ್ಳಿ ತಿಳಿಸಿದ್ದಾರೆ
ರೈತ ರ್ಯಾಲಿಯಲ್ಲಿ ೨೫ ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕೋಡಿಹಳ್ಳಿ ತಿಳಿಸಿದರು