Breaking News

ಡಿಸಿ ಕಚೇರಿ ಎದರು ರೈತರಿಂದ ಸಮಸ್ಯೆಗಳ ಭಜನೆ…

ಬೆಳಗಾವಿ
ರೈತರ ವಿವಿಧ ಸಮಸ್ಯೆಯನ್ನು ಬಗೆ ಹರಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಮಹದಾಯಿ-ಕಳಸಾ ಬಂಡೂರಿ ಹೋರಾಟಗಾರ ವಿಜಯ ಕುಲಕರ್ಣಿ ಆರೋಪಿಸಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಬ್ಬು ಹೋರಾಟಗಾರರ ಪ್ರತಿಭಟನೆ ಬೆಂಬಲ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. ಈಗಾಗಲೇ ಎರಡು ತಿಂಗಳಿನಿಂದ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸುವಂತೆ ರೈತರು ಹೋರಾಟ ನಡೆಸಿದರೂ ರಾಜ್ಯ ಸರಕಾರ ಸಕ್ಕರೆ ಕಾರ್ಖಾನೆಯವರ ಲಾಭಿಗೆ ಮಣಿದು ಎಫ್‍ಆರ್‍ಪಿ ದರ ನಿಗದಿ ಮಾಡಲು ಸಾಧ್ಯವಾಗುತ್ತಿಲ್ಲ. ರೈತರ ಪರವಾದ ಸರಕಾರ ಎಂದು ಹೇಳುವ ಸಿಎಂ ಕುಮಾರಸ್ವಾಮಿ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.
ಕಳಸಾ ನಾಲೆಯನ್ನು ಮಲಪ್ರಭಾ ನದಿಗೆ ಜೋಡಿಸಬೇಕೆಂದು ಕಳೆದ 25 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. 2006ರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಸಿಎಂ ಹಾಗೂ ಇಂದಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಸಿಎಂ ಕುಮಾರಸ್ವಾಮಿ ಅವರೇ ಆಗಿದ್ದಾರೆ. ಇವರಿಗೆ ನಮ್ಮ ಸಂಕಷ್ಟ ಕೇಳುತ್ತಿಲ್ಲ. ಅತ್ತ ಕೇಂದ್ರ ಸರಕಾರ ಕರ್ನಾಟಕ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಹರಿಹಾಯ್ದರು.
ಕಳಸಾ ಬಂಡೂರಿಯಲ್ಲಿ ನ್ಯಾಯಲಯ ನೀಡಿದ ತೀರ್ಪುನ್ನು ರಾಜ್ಯ ಸರಕಾರ ಪಾಲಿಸಬೇಕು. ಉತ್ತರ ಕರ್ನಾಟಕಕ್ಕೆ ಬರಬೇಕಾದ ನೀರನ್ನು ಇಲ್ಲಿಯವರೆಗೂ ನೀಡದಿರುವುದು ದುರ್ದೈವದ ಸಂಗತಿ. ಕೂಡಲೇ ರಾಜ್ಯ ಸರಕಾರ ಕಾಲುವೆಗಳ ಮೂಲಕ ಮಹದಾಯಿ ನದಿ ನೀರನ್ನು ಮಲಪ್ರಭೆಗೆ ಹರಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ರೈತರೇ ನ್ಯಾಯಾಲಯದ ತೀರ್ಪಿನಂತೆ ಕಳಸಾ ಬಂಡೂರಿಯ ತಡೆಗೋಡೆಯನ್ನು ಒಡೆಯುವುದಾಗಿ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕುಮಾರಸ್ವಾಮಿ ಅವರು ರೈತರ ಮೇಲಿನ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಮುಖ್ಯಮಂತ್ರಿಯಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿದ್ದಾರೆ. ನಮ್ಮದ್ದು ಸಮ್ಮಿಶ್ರ ಸರಕಾರ ದೋಸ್ತಿ ಪಕ್ಷದ ಮಾತನ್ನು ಕೇಳಬೇಕು ಎನ್ನುವ ಉಡಾಫೆ ಉತ್ತರ ನೀಡುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗಾವಿಯ ಅಧಿವೇಶನದಲ್ಲಿ ರೈತರ ಮೇಲಿನ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿದ್ದಗೌಡ ಮೋದಗಿ, ರಾಘವೇಂದ್ರ ನಾಯಕ, ಜಯಶ್ರೀ ಗುರಣ್ಣವರ ಸೇರಿದಂತೆ ನೂರಾರು ರೈತರು ಜಿಲ್ಲಾಧಿಕಾರಿಯ ಆವರಣದಲ್ಲಿ ಭಜನೆ ಮಾಡುವುದರ ಮೂಲಕ ವಿನೂತನ ಪ್ರತಿಭಟನೆಯನ್ನು ಸರಕಾರದ ವಿರುದ್ದ ಮಾಡುತ್ತಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *