Home / Uncategorized / ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಸೊಂಕಿತರ ಸಂಖ್ಯೆ ಮತ್ತೆ ಜಂಪ್, ಇಂದು 23 ಸೊಂಕಿತರ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಸೊಂಕಿತರ ಸಂಖ್ಯೆ ಮತ್ತೆ ಜಂಪ್, ಇಂದು 23 ಸೊಂಕಿತರ ಪತ್ತೆ

ಬೆಳಗಾವಿ – ಮಹಾಮಾರಿ ಕೊರೋನಾ ಭೀತಿಗೆ ಬೆಳಗಾವಿ ಜಿಲ್ಲೆ ಬೆಚ್ಚಿ ಬಿದ್ದಿದೆ.ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಂಪ್ ಆಗುತ್ತಲೇ ಇದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 23 ಜನ ಸೊಂಕಿತರು ಪತ್ತೆಯಾಗಿದ್ದಾರೆ.

ಇಂದು ಮಂಗಳವಾರ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 23 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1096 ಕ್ಕೆ ತಲುಪಿದೆ

ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಒಟ್ಟು 1096 ಸೊಂಕಿತರು ಪತ್ತೆಯಾಗಿದ್ದು ಅದರಲ್ಲಿ 426ಸೊಂಕಿತರು ಗುಣಮುಖರಾಗಿದ್ದಾರೆ 640 ಜನರಲ್ಲಿ ಸೊಂಕು ಸಕ್ರೀಯ ವಾಗಿದ್ದು ಒಟ್ಟು 30 ಜನ ಬಲಿಯಾಗಿದ್ದಾರೆ‌. ಇವತ್ತು ಒಂದೇ ದಿನ 4 ಜನ ಬಲಿಯಾಗಿದ್ದಾರೆ

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಭೀತಿ ಹೆಚ್ಚಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಬಹಳಷ್ಟು ಜನ ಜೀವ ಬಿಟ್ಟಿದ್ದಾರೆ,ಸಣ್ಣ ಪುಟ್ಟ ಕಾಯಿಲೆಗೆ ಚಿಕಿತ್ಸೆ ನೀಡಬೇಕಾದ ವೈದ್ಯರು ದವಾಖಾನೆ ಬಂದ್ ಮಾಡಿದ್ದಾರೆ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವೀಡ್ ರಿಪೋರ್ಟ್ ಕೇಳುತ್ತಿದ್ದಾರೆ.ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ಪರಿಸ್ಥಿತಿ ಸಾಮಾನ್ಯವಾಗಿದ್ದು ಪರಿಸ್ಥಿತಿಗೆ ಹೆದರಿ ಹಲವಾರು ಜನ ಜೀವ ಬಿಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಲಾಕ್‌ಡೌನ್ ತೆರವು

ಬೆಳಗಾವಿ,-ಕೋವಿಡ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ದಿನಾಂಕ:14.07.2020ರ ರಾತ್ರಿ 8.00 ಗಂಟೆಯಿಂದ ಜಾರಿಯಲ್ಲಿದ್ದ ಲಾಕ್‌ಡೌನ್ ಅನ್ನು 22.07.2020 ರಿಂದ ತೆರವುಗೊಳಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಗೆ ಮಾತ್ರ ಸೀಮಿತವಾಗಿ ಕಳೆದ ಏಳು ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿತ್ತು.

ಲಾಕ್‌ಡೌನ್ ತೆರವುಗೊಳಿಸಿರುವುದರಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.

ಕೋವಿಡ್-೧೯ ಹರಡುವಿಕೆಯನ್ನು ತಡೆಗಟ್ಟಲು ಮತ್ತು ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ.
***

 

Check Also

ಸಂಗೊಳ್ಳಿ ರಾಯಣ್ಣನ ಮೂರ್ತಿ ಸಮಸ್ಯೆ ಇತ್ಯರ್ಥಕ್ಕೆ,ಡಿಸಿ ಮುತವರ್ಜಿ ವಹಿಸಲಿ

ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ …

Leave a Reply

Your email address will not be published. Required fields are marked *