ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಕ್ಷರಶಃ ಇಲೆಕ್ಷನ್ ಶುರುವಾಗಿದೆ.ಕಾಂಗ್ರೆಸ್ ಬಿಜೆಪಿ ನಡುವೆ ಗೀಫ್ಟ್ ಹಂಚಿಕೆ ಪಾಲಿಟೀಕ್ಸ್ ನಡೆಯುತ್ತಿರುವ ಬೆನ್ನಲ್ಲಿಯೇ ಹಳದಿ ಕುಂಕುಮ ಕಾರ್ಯಕ್ರಮದ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನಗಳು ಜೋರಾಗಿಯೇ ನಡೆದಿವೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಹಳದಿ ಕುಂಕುಮ ಕಾರ್ಯಕ್ರಮ ನಡೆಸಿ ಕ್ಷೇತ್ರದ ಮಹಿಳೆಗೆ ಸೀರೆ ಉಡುಗೊರೆಯಾಗಿ ನೀಡಿದ ಬಳಿಕ,ನಂತರ ಟಿಫೀನ್ ಬಾಕ್ಸ್, ಮೀಕ್ಸರ್ ಹಂಚಿಕೆ ಮಾಡುತ್ತಿದ್ದಾರೆ, ಮೀಕ್ಸರ್ ಹಂಚಿಕೆ ಮಾಡುವ ಕಾರ್ಯಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳಕರ ಗ್ರಾಮೀಣ ಉತ್ಸವ ಎಂದು ಲೇಬಲ್ ಹಚ್ಚಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಆಕಾಂಕ್ಷಿಗಳೂ ಸಹ ಬೆಳಗಾವಿ ಗ್ರಾಮೀಣದಲ್ಲಿ ಹಳದಿ ಕುಂಕುಮ ಕಾರ್ಯಕ್ರಮ ಶುರು ಮಾಡಿದ್ದಾರೆ,ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ತಮ್ಮ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಗಿಪ್ಟ್ ನೀಡಿದ ಬಳಿಕ, ಬಿಜೆಪಿಯ ಮತ್ತೋರ್ವ ಆಕಾಂಕ್ಷಿ ರಮೇಶ್ ಜಾರಕಿಹೊಳಿ ಅವರ ಆಪ್ತ ನಾಗೇಶ್ ಮನ್ನೋಳಕರ್ ಇತ್ತೀಚಿಗೆ ಹಿಂಡಲಗಾ ಗ್ರಾಮದಲ್ಲಿ ಹಳದಿ ಕುಂಕುಮ ಕಾರ್ಯಕ್ರಮ ನಡೆಸಿ ಸೀರೆ ಮತ್ತು ಹಾಟ್ ಬಾಕ್ಸ್ ಹಂಚಿದ್ದಾರೆ.
ಸೂಳೆಭಾವಿಯಲ್ಲಿ ನಾಳೆ ಬೃಹತ್ ಹಳದಿ ಕುಂಕುಮ ಕಾರ್ಯಕ್ರಮ….
ನಾಳೆ ಶುಕ್ರವಾರ ಲಕ್ಷ್ಮೀ ದೇವಿಯ ವಾರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರಸಿದ್ದ ಸೂಳೆಭಾವಿಯ ಲಕ್ಷ್ಮೀ ದೇವಸ್ಥಾನದ ಸನ್ನಿದಾನದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಬೃಹತ್ ಹಳದಿ ಕುಂಕುಮ ಕಾರ್ಯಕ್ರಮವನ್ಬು ಆಯೋಜನೆ ಮಾಡಿದ್ದಾರೆ.
ನಾಳೆ ಶುಕ್ರವಾರ,ಸಂಜೆ 4 ಗಂಟೆಗೆ ಸೂಳೆಭಾವಿಯ ದೇವಸ್ಥಾನದ ಪಕ್ಕದಲ್ಲಿರುವ ಜಾಗೆಯಲ್ಲಿ ಹಳದಿ ಕುಂಕುಮ ಕಾರ್ಯಕ್ರಮ ನಡೆಯಲಿದ್ದು,ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಮಹಿಳೆಯರು ಭಾಗವಹಿಸುತ್ತಾರೆ ಎಂದು ರಮೇಶ್ ಜಾರಕಿಹೊಳಿ ಅಭಿಮಾನಿಗಳು ತಿಳಿಸಿದ್ದು,ಮಾಜಿ ಶಾಸಕ ಸಂಜಯ ಪಾಟೀಲ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ಇದೆ.ಹಳದಿ ಕುಂಕುಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಆಕರ್ಷಕ ಗೀಫ್ಟ್ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ.