ಬೆಳಗಾವಿ: ಬೆಳಗಾವಿ ಕೇಂದ್ರ ಕಾರಾಗ್ರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಲವತ್ತಾರು ಖೈಧಿಗಳಿಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಜೈಲು ಸಮಿತಿ ರಾಜ್ಯ ಸರ್ಕಾರಕ್ಕೆ ಶಿಪಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ.
ಬೆಳಗಾವಿಯ ಹಿಮಡಲಗಾ ಕಾರಾಗೃದಲ್ಲಿ ನೂರಾರು ಜನ ಖೈದಿಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ಈಗಾಗಲೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಖೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರಂತೆ ಸ್ವಾತಂತ್ರ್ಯೋತ್ಸವದ ದಿನದಂದು ಜೈಲಿನಲ್ಲಿರುವ ನಲವತ್ತಾರು ಖೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಈ ಕುರಿತು ಮಾಹಿತಿ ನೀಡಲು ಜೈಲಿನ ಅಧೀಕ್ಷಕರು ನಿರಾಕರಿಸಿದ್ದಾರೆ. ಸರ್ಕಾರದ ಆದೇಶ ತಲುಪಿದ ನಂತರ ಮಾಹಿತಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
