ಬೆಳಗಾವಿ- ರಾಜ್ಯದಲ್ಲಿಯೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಜಿಲ್ಕೆಯ ಏಳು ಜನ ಬಿಜೆಪಿಯ ಹಾಲಿ ಹಾಗು ಮಾಜಿ ಶಾಸಕರನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಯಲ್ಲಿ ದೊಡ್ಡ ಬಲೇಯನ್ನೇ ಬೀಸಿದ್ದಾರೆ
ಮಾಜಿ ಸಚಿವ ಸತೀಶ ಜಾರಕಿಹೊಳಿ,ಉಮೇಶ ಕತ್ತಿ,ರಮೇಶ ಕತ್ತಿ,ಬಾಲಚಂದ್ರ ಜಾರಕಿಹೊಳಿ,ಜದೀಶ ಮೆಟಗುಡ್ಡ, ಅವರನ್ನು ಜೆಡಿಎಸ್ ಪಕ್ಷದ ಕಡೆಗೆ ಸೆಳೆಯಲು ಕುಮಾರಸ್ವಾಮಿ ಅವರು ಈಗಾಗಲೇ ಈ ನಾಯಕರ ಜೊತೆ ಹತ್ತು ಹಲವು ಬಾರಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
ಉಮೇಶ ಕತ್ತಿ ಬಾಲಚಂದ್ರ ಜಾರಕಿಹೊಳಿ ಅವರು ಜೆಡಿಎಸ್ ಸೇರಿಕೊಂಡರೇ ಇವರ ಜೊತೆ ರಾಜು ಕಾಗೆ ಮತ್ತು ಶಶಿಕಲಾ ಜೊಲ್ಲೆ ಅವರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನುವ ಚರ್ಚೆಗಳು ಈಗ ಜಲ್ಲೆಯಲ್ಲಿ ಶುರುವಾಗಿವೆ
ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ರಾಯಚೂರಿನಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜ್ಯಾದ್ಯಂತ ಸುದ್ಧಿಯಾಗಿದ್ದರು ಇದರ ಬೆನ್ನಲ್ಲಿಯೇ ಪ್ರಭಾಕರ ಕೋರೆ ಅವರ ನಿವಾಸದಲ್ಲಿ ನಡೆದ ಬಿಜೆಪಿ ಕೋರ್ ಕಮೀಟಿ ಸಭೆಗೆ ಬಾಲಚಂದ್ರ ಜಾರಕಿಹೊಳಿ ಮತ್ತು ಉಮೇಶ ಕತ್ತಿ ಅವರು ಗೈರಾಗುವ ಮೂಲಕ ಬಿಜೆಪಿ ಜೊತೆ ಅವರ ಸಮಂಧ ಸರಿಯಾಗಿಲ್ಲ ಎನ್ನುವ ಮುನ್ಸೂಚನೆ ನೀಡಿದ್ದರು
ಬೈಲಹೊಂಗಲದ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಬೆಂಬಲಿಗರೂ ಬಿಜೆಪಿ ಕೋರ್ ಕಮೀಟಿ ಮೀಟಿಂಗ್ ನಲ್ಲಿ ಬಿಜೆಪಿ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದರು
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ ಏಳು ಜನ ಬಿಜೆಪಿ ಹಾಗು ಕಾಂಗ್ರೆಸ್ ಶಾಸಕರನ್ನು ತಮ್ಮ ಕಡೆ ಸೆಳೆಯಲು ಟಾರ್ಗೇಟ್ ಮಾಡಿದ್ದಾರೆ ಉತ್ತರ ಕರ್ನಾಟಕದಲ್ಲಿ ಕನಿಷ್ಠ ಮೂವತ್ತು ಜನ ಶಾಸಕರನ್ನು ಗೆಲ್ಲಿಸುವದಕ್ಕಾಗಿಯೇ ಕುಮಾರಸ್ವಾಮಿ ಅವರು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದು ಅವರು ಎಷ್ಟರ ಮಟ್ಟಿಗೆ ಯಶಸ್ವಿ ಆಗುತ್ತಾರೆ ಎನ್ನುವದು ಕಾದು ನೋಡಬೇಕಾಗಿದೆ
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ ಇದರ ಲಾಭವನ್ನು ಪಡೆಯಲು ಕುಮಾರಸ್ವಾಮಿ ಎಲ್ಲಿಲ್ಲದ ಪ್ರಯತ್ನ ನಡೆಸಿದ್ದಾರೆ
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಹುಬ್ಬಳ್ಳಿಗೆ ಹೈಕೋರ್ಟ ಪೀಠ,ಬೆಳಗಾವಿಯಲ್ಲಿ ವಿಧಾನ ಮಂಡಳದ ಅಧಿವೇಶನ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸುವ ನಿರ್ಧಾರ ಕೈಗೊಂಡು ಉತ್ತರ ಕರ್ನಾಟಕದ ಶಾಸಕರು ತರುವ ಎಲ್ಲ ಪ್ರಸ್ತಾವಣೆಗಳನ್ನು ಮಂಜೂರು ಮಾಡುವ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕುಮಾರಸ್ವಾಮಿ ನಾಂದಿ ಹಾಡಿದ್ದರು
ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರು ಅಪಾರ ಜನ ಮೆಚ್ಚುಗೆ ಗಳಿಸಿದ್ದಾರೆ ಇದನ್ನು ಮತಗಳನ್ನಾಗಿ ಪರಿವರ್ತಿಸುವ ಪ್ರಯತ್ನವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ