ಕನ್ನಡದ ಕಾರ್ಯಕ್ರಮಕ್ಕೆ ಕೈ ಕೊಟ್ಟ ಕನ್ನಡತಿ..ಶಿಲ್ಪಾ ಶೆಟ್ಟಿ…!

ಬೆಳಗಾವಿ-ಜಿಲ್ಲಾಧಿಕಾರಿ ಎನ್ ಜೈರಾಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಹೊಸ ಮೆರಗು ನೀಡಬೇಕೆನ್ನುವ ಉದ್ದೇಶದಿಂದ ಹಾಲಿವುಡ್ ನಲ್ಲಿ ಕನ್ನಡದ ಕೀರ್ತಿಯನ್ನು ಬೆಳಗಿದ ಕನ್ನಡತಿ ಶಿಲ್ಪಾ ಶೆಟ್ಟಿ ಅವರನ್ನು ಬೆಳಗಾವಿಯ ರಾಜ್ಯೋತ್ಸವದ ಮೆರವಣಿಗೆಗೆ ಕರೆತರುವ ಪ್ರಯತ್ನ ಮಾಡಿದ್ದರು ಆರಂಭದಲ್ಲಿ ಶಿಲ್ಪಾ ಶೆಟ್ಟಿ ಬೆಳಗಾವಿಗೆ ಬರಲು ಒಪ್ಪಿಗೆ ಸೂಚಿಸಿದ್ದರು ಕೊನೆ ಘಳಿಗೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಶಿಲ್ಪಾ ಶೆಟ್ಟಿಯ ಕಾರ್ಯಕ್ರಮ ರದ್ದಾಗಿದೆ

ಜಿಲ್ಲಾಡಳಿತ ಈಗ ಶಿಲ್ಪಾ ಶೆಟ್ಟಿಯ ಬದಲಾಗಿ ನವ್ಹೆಂಬರ ಮೊದಲ ವಾರದಲ್ಲಿ ಬೆಳಗಾವಿಯ ಸರ್ದಾರ ಮೈದಾನದಲ್ಲಿ ಖ್ಯಾತ ಸಂಗೀತ ನಿರ್ದೇಶಕರೊಬ್ಬರನ್ನು ಕರೆಯಿಸಿ ಅದ್ಧೂರಿಯ ರಸಮಂಜರಿ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದೇವೆ ಎಂದು ಜಿಲ್ಲಾಧಿಕಾರಿ  ಎನ್ ಜೈರಾಮ ಮಾದ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ

ಬೆಳಗಾವಿಯ ಕನ್ನಡ ರಾಜ್ಯೋತ್ಸವದಲ್ಲಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಹೊಸ ಸ್ವರೂಪ ನೀಡಲು ನಿರ್ಧರಿಸಿರುವ ಜಿಲ್ಲಾಧಿಕಾರಿ ಎನ್ ಜೈರಾಮ ಅವರು ಈ ಬಾರಿ ಬೆಳಗಾವಿ ನಗರವನ್ನು ಕನ್ನಡಮಯವನ್ನಾಗಿಸಲು ಎಲ್ಲ ರಿತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *