ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯ ಕೃಷ್ಣಾ, ವೇಧಗಂಗಾ, ದೂಧಗಂಗಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳು ಜಲ ಪ್ರಳಯದಿಂದ ತತ್ತರಿಸಿ ಹೋಗಿದ್ದಾರೆ. ಕೃಷ್ಣಾವತಾರದಿಂದ ನದಿ ಪಾತ್ರದ ಸುಮಾರು ಆರು ಸಾವಿರ ಹೆಕ್ಟರ್ ಬೆಳೆ ಪ್ರದೇಶ ಜಲ ಸಮಾಧಿಯಾಗಿದೆ.
ಕೃಷ್ಣಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಒಳ ಹರಿವು 1 ಲಕ್ಷ 85 ಸಾವಿರ ಕ್ಯೂಸೆಕ್ಸ್ ನಷ್ಟು ಇದ್ದು, ಒಳ ಹರಿವು 2 ಲಕ್ಷ ಕ್ಯೂಸೆಕ್ಸ್ ಮೀರಿದರೆ ಅಪಾಯ ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಕೃಷ್ಣೆಯ ಪ್ರವಾಹದಿಂದಾಗಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಏಳು ಸೇತುವೆಗಳು ಮುಳುಡೆಯಾಗಿವೆ. ರಾಯಬಾಗ ತಾಲೂಕಿ ಮೂರು ಸೇತುವೆಗಳು, ಅಥಣಿ ತಾಕಿನ ಒಂದು ಸೇತುವೆ ಜಲಾವೃತಗೊಂಡಿವೆ.
ರಾಯಬಾಗ ತಾಲೂಕಿನ ಹಳೆ ದಿಗ್ಗೇವಾಡಿ ಗ್ರಾಮದ ದೇವಸ್ಥಾನವೊಂದು ಮುಳುಗಡೆಯಾಗಿದೆ. ನದಿ ತೀರದ ಗ್ರಾಮಗಳಲ್ಲಿ ನದಿ ನೀರು ನುಗ್ಗುತ್ತಿದೆ. ಕೃಷ್ಣೆಯ ಪ್ರವಾಹ 2 ಲಕ್ಷ ಕ್ಯೂಸೆಕ್ಸ್ ಮೀರಿದರೆ ನದಿ ತೀರದ ಹಲವಾರು ಗ್ರಾಮಗಳು ಜಲಾವೃತಗೊಳ್ಳುವ ಸಾಧ್ಯತೆಗಳಿವೆ. ಕೃಷ್ಣೆಯ ತೀರದಲ್ಲಿ ಆತಂಕ ಮನೆ ಮಾಡಿದೆ.
ಕೃಷ್ಣೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ಜಿಲ್ಲಾಧಿಕಾರಿ ಎನ್.ಜಯರಾಮ್ ಅವರು ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿ ನದಿ ಪಾತ್ರದಲ್ಲಿ ಎಲ್ಲ ರೀತಿಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ಕೃಷ್ಣಾ ನದಿ ಪ್ರವಾಹ ಹೆಚ್ಚಾಗಿರುವುದರಿಂದ ನದಿ ದಂಡೆಯ ಬೆಳೆ ಪ್ರದೇಶ ಜಲಾವೃತಗೊಂಡಿದ್ದು, ನೀರಿನ ಪ್ರಮಾಣ ಇಳಿದ ಬಳಿಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಸೂಚಿಸಿದರು.
ನದಿ ತೀರದ ಗ್ರಾಮಗಳಲ್ಲಿ ನೀರು ನಿಂತಿರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆ ಬಳಿಕ ಜಿಲ್ಲಾಧಿಕಾರಿ ಜಯರಾಮ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …