Breaking News

ಕೊನೆಗೂ ಬೆಳಗಾವಿಯಲ್ಲಿ ಶುರು ಆಯ್ತು ಕೊರೋನಾ ಪ್ರಯೋಗಾಲಯ….!!!!

ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಸಚಿವ ಜಗದೀಶ್ ಶೆಟ್ಟರ್

ಬೆಳಗಾವಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು.

ಇಲ್ಲಿನ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿರುತ್ತದೆ.

ಸದ್ಯಕ್ಕೆ ಪ್ರತಿದಿನ 90 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಪ್ರಯೋಗಾಲಯ ಹೊಂದಿರುತ್ತದೆ.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ‌ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ,
ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ,ಮತ್ತಿತರರು ಉಪಸ್ಥಿತರಿದ್ದರು.
ಪ್ರಯೋಗಾಲಯದ ನೋಡಲ್ ಅಧಿಕಾರಿಯಾಗಿರುವ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಉಪ ನಿರ್ದೇಶಕ ಡಾ.ಬನ್ನಪ್ಪ ಹಾಗೂ ವಿಜ್ಞಾನಿಗಳು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *