ಬೆಳಗಾವಿ- ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಸರಾಯಿ ಸಾರಾಯಿ ಸಿಗಲಿಲ್ಲ ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳಗಾವಿಯ ಅನಗೋಳದ ಬೆಂಡಿಗೇರಿ ಚಾಳದಲ್ಲಿ ಘಟನೆ.ನಡೆದಿದೆ.
ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಹಡಪದ(42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಲೂನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ದೇವೇಂದ್ರಪ್ಪ ಹಡಪದ.
ಮೂಲತಃ ಬೆಳಗಾವಿ ಜಿಲ್ಲೆ ಸವದತ್ತಿಯ ನಿವಾಸಿಯಾಗಿರುವ ದೇವೇಂದ್ರಪ್ಪ.
ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ. ಮದ್ಯಕ್ಕೆ ದಾಸನಾಗಿದ್ದ ದೇವೆಂದ್ರ ಎರಡು ದಿನಗಳಿಂದ ಮದ್ಯ ಸಿಗದಿದ್ದಕ್ಕೆ ಬೇಸರಗೊಂಡಿದ್ದನು. ಅನೇಕ ಕಡೆಗಳಲ್ಲಿ ಮದ್ಯಕ್ಕೆ ಅಲೆದ್ರು ಯಾವುದೇ ಪ್ರಯೋಜನ ಆಗಿರಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಎಂದು ದೇವೇಂದ್ರನ ಕುಟುಂಬ ಮೂಲಗಳು ತಿಳಿಸಿವೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ