Breaking News

46 ಜನ ಎಂಇಎಸ್ ಮುಖಂಡರು ಸೇರಿ 1500 ಜನರ ವಿರುದ್ಧ ಕೇಸ್

ಬೆಳಗಾವಿ – ಕನ್ನಡ ರಾಜ್ಯೋತ್ಸವ ದಿನವೇ ಎಂಇಎಸ ಕರಾಳ ದಿನಾಚರಣೆ ಮಾಡುವ ಮೂಲಕ ಪುಂಡಾಟಿಕೆ ಪ್ರದರ್ಶಿಸಿದ 46 ಜನ ಎಂಇಎಸ ಮುಖಂಡರು ಸೇರಿ 1500 ಜನರ ವಿರುದ್ಧ ಕೇಸ್ ದಾಖಲಾಗಿದೆ.

ನಾಡದ್ರೋಹಿ ಎಂಇಎಸ್ ಪುಂಡರ ಮೇಲೆ ಕೇಸ್ ದಾಖಲಿಸಲಾಗಿದೆ.ಅನುಮತಿ ಪಡೆಯದೇ ರಾಜ್ಯೋತ್ಸವದ ದಿನವೇ ಕರಾಳ ದಿನಾಚರಣೆ ಮಾಡುವ ಮೂಲಕ ಗೂಂಡಾಗಿರಿ ಪ್ರದರ್ಶಿಸದ 46 ಜನ ಎಂಇಎಸ ಮುಖಂಡರು ಸೇರಿ 1500 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಜಿ ಶಾಸಕ ಮನೋಹರ ಕಿಣೇಕರ, ಎಂಇಎಸ ಮುಖಂಡರಾದ ರಮಾಕಾಂತ ಕೊಂಡುಸ್ಕರ, ಶುಭಂ ಶಳಕೆ, ವಿಕಾಸ ಕಲಘಟಗಿ, ಶಿವಸೇನೆ ಮುಖಂಡ ಪ್ರಕಾಶ ಮರಗಾಳೆ ಸೇರಿ 46 ಮುಖಂಡರ ಮೇಲೆ ಕೇಸ್ ದಾಖಲಿಸಲಾಗಿದೆ.ನವೆಂಬರ್1 ರಂದು ಜಿಲ್ಲಾಡಳಿತ ಅನುಮತಿ ಕೊಡದಿದ್ದರು ಕರಾಳ‌ ದಿನ ಮೆರವಣಿಗೆ ಮಾಡಿದ್ದ ಎಂಇಎಸ್, ನಗರದ ಧರ್ಮವೀರ ಸಂಭಾಜಿ ಮೈದಾನದಿಂದ ಮರಾಠಾ ಮಂದಿರ ವರೆಗೂ ಮೆರವಣಿಗೆ ಮಾಡಿದ್ರುಮೆರವಣಿಗೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಭೌಮತ್ವ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದ ಪುಂಡರ ಮೇಲೆ ಕೇಸ್ ಹಾಕಲಾಗಿದೆ.

ಮಹಾರಾಷ್ಟ್ರ ಸರ್ಕಾರದ ಪರವಾಗಿ ಘೋಷಣೆ ಹಾಕಿದ್ದ ನಾಡದ್ರೋಹಿಗಳು,ಸಾರ್ವಜನಿಕ ಶಾಂತಿ ಭಂಗ, ನಗರದಲ್ಲಿ ದೊಂಬಿ ಎಬ್ಬಿಸಲು ಪ್ರಚೋದನೆ, ಅಕ್ರಮವಾಗಿ ಕೂಟ ಸೇರಿ ಸಭೆ ನಡೆಸಿದಕ್ಕೆ ಕೇಸ್ ದಾಖಲು ಮಾಡಲಾಗಿದೆ.ಬಿಎನ್ಎಸ್ ಕಾಯ್ದೆಯಡಿ ಸಹ ಕಲಂ 189(2),192,292,285,190 ಕಲಂ ಅಡಿ ಕೇಸ್ ದಾಖಲು ಮಾಡಲಾಗಿದೆ.

ಅಲ್ಲದೇ ಬೆಳಗಾವಿ ಸೇರಿ ಗಡಿ ಪ್ರದೇಶಗಳು ಮಹಾರಾಷ್ಟ್ರ ಸೇರಿಸುವಂತೆ ಘೋಷಣೆ ಹಾಕಿದ್ದ ಪುಂಡರು ಪುಂಡಾಟಿಕೆ ಪ್ರದರ್ಶಿಸಿದ್ದಾರು.

Check Also

ಇಂದು ರಾಜ್ಯಾದ್ಯಂತ ವಕ್ಫ್ ಬೋರ್ಡ್ ಚುನಾವಣೆ, ಬೆಳಗಾವಿಯಲ್ಲಿ ಮತದಾನ.

ಬೆಳಗಾವಿ – ಬಹು ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಕ್ಫ್ ಬೋರ್ಡ್ ಚುನಾವಣೆ ನಡೆಯುತ್ತಿದೆ. ಬೆಳಗಾವಿ ಸೇರಿದಂತೆ …

Leave a Reply

Your email address will not be published. Required fields are marked *