ಬೆಳಗಾವಿ- ಬೆಳಗಾವಿಯ ಕೆಲವು ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,ಯಾವುದೇ ಮುಲಾಜಿಲ್ಲದೇ ಹೆಚ್ಚಿನ ಬಿಲ್ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕೋವೀಡ್ ನಿಯಂತ್ರಣ,ಮತ್ತು ಪ್ರವಾಹ ನಿರ್ವಹಣೆಯ ಕುರಿತು ಪ್ರಗತಿ ಪರಶೀಲನೆ ನಡೆಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಸರ್ಕಾರದ ಆದೇಶ ಉಲ್ಲಂಘನೆ ಮಾಡಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಬೆಂಗಳೂರಿನಲ್ಲಿ ಶಿಸ್ತಿನ ಕ್ರಮ ಜರುಗಿಸಲಾಗಿದೆ ಅದೇ ಮಾದರಿಯಲ್ಲಿ ಬೆಳಗಾವಿಯಲ್ಲಿಯೂ ಕ್ರಮ ಕೈಗೊಳ್ಳುತ್ತೇವೆ.ಈ ವಿಷಯದಲ್ಲಿ ಯಾವುದೇ ಮುಲಾಜು ಕಾಯುವದಿಲ್ಲಎಂದು ಸಚಿವರು ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಕೋವೀಡ್ ನಿಯಂತ್ರಣ ಮಾಡಲು ಎಲ್ಲ ಅಧಿಕಾರಿಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ.ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಸಿಟಿವ್ಹಿ ಅಳವಡಿಸುವಂತೆ ಈ ಹಿಂದೆ ನಡೆದ ಸಭೆಯಲ್ಲಿ ಸೂಚಿಸಲಾಗಿತ್ತು,ಆದರೆ ಇನ್ನುವರೆಗೆ ಸಿಸಿಟಿವ್ಹಿ ಅಳವಡಿಸಿಲ್ಲ,ಈ ಕುರಿತು ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳಿಗೆ ವಾರ್ನಿಂಗ್ ಮಾಡಿದ್ದೇನೆ ಆದಷ್ಟು ಬೇಗನೆ ಸಿಸಿಟಿವ್ಹಿ ಕ್ಯಾಮರಾ ಅಳವಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಸೂಚಿಸಿದರು.
ಬೆಳಗಾವಿ ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದಾಗಿ ನಗರದ ಯಾವುದೇ ಪ್ರದೇಶಗಳಿಗೆ ನೀರು ನುಗ್ಗದಂತೆ ಮುಂಜಾಗೃತೆ ವಹಿಸಲು ಗುತ್ತಿಗೆದಾರರಿಗೆ ವಾರ್ನ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.