ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಹುಬ್ಬಳ್ಳಿ ಮಾದರಿಯಲ್ಲಿ ಬೆಳಗಾವಿಯಲ್ಲೂ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುತ್ತೇವೆ ಎಂದರು.
ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ದಾಂಧಲೆ ಅದು ಕಾಂಗ್ರೆಸ್ಸಿನ ದಾಂಧಲೆ,ಅದಕ್ಕೂ ಬಿಜೆಪಿಗೂ ಸಮಂಧವಿಲ್ಲ,ಈ ದಾಂಧಲೆಯಲ್ಲಿ ಭಾಗಿಯಾದ ಸಂಘಟನೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವ ಕುರಿತು ಮುಂದಿನ ಕ್ಯಾಬಿನೆಟ್ ಮೀಟೀಂಗ್ ನಲ್ಲಿ ತೀರ್ಮಾಣ ಕೈಗೊಳ್ಳುತ್ತೇವೆ, ಗೃಹ ಸಚಿವ ಬೊಮ್ಮಾಯಿ ಅವರು ಬೆಂಗಳೂರಿನ ಗಲಭೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಮಹಾರಾಷ್ಟ್ರದ ಜೊತೆ ನಿರಂತರವಾಗಿ ಸಮನ್ವಯತೆ ಸಾಧಿಸಿದ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ,ಯಾವುದೇ ರೀತಿಯ ಹಾನಿ ಆಗಿಲ್ಲ,ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಎಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆಯೋ ಅಷ್ಟೇ ಪ್ರಮಾಣದಲ್ಲಿ ಅಲಮಟ್ಟಿ ಜಲಾಶಯದಿಂದ ನೀರು ಹರಿದು ಬಿಡಲಾಗುತ್ತಿದೆ,ಹೀಗಾಗಿ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದು ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದರು.