ಬೆಂಗಳೂರು. ಜು22: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಡಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ ಉಕ್ಕಿ ಸಂಭವಿಸಬಹುದಾದ ಹಾನಿ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶ ಈ ಯೋಜನೆಯದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬದಾಮಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ನಿರ್ಮಿಸಲು ಉದ್ದೇಶಿರುವ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಕರ್ನಾಟಕ ನೀರಾವರಿ ನಿಗಮದ ಅಧೀನದಲ್ಲಿರುವ 3 ಎಕರೆ ಜಮೀನನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
*”**