Breaking News

ಬೆಳಗಾವಿಯಲ್ಲಿ ಬಜೆಟ್ ಕುರಿತು ಭರ್ಜರಿ ತಯಾರಿ….!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸರ್ಕಾರದಿಂದ ಸಹಾಯ ಪಡೆಯುವ ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಳ್ಳುತ್ತಾರೆ ಎನ್ನುವದಕ್ಕೆ ಇವತ್ತು ಬೆಳಗಾವಿಯ ಡಿಸಿ ಕಚೇರಿಯ ಸಭಾಂಗಣದಲ್ಲಿ ಅವರು ನಡೆಸಿದ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ‌.

ಇಂದು ಬೆಳಿಗ್ಗೆ ಏಕಾಏಕಿ ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ,ಕಾರ್ಮಿಕ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಶಾಸಕ ಅಭಯ ಪಾಟೀಲ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಮಗಾರಿಗಳ ಪಟ್ಟಿ ಮಾಡಿ,ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲುಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು

ಬೆಳಗಾವಿಯ ಮಚ್ಛೆ ಗ್ರಾಮದಲ್ಲಿ ESI ಆಸ್ಪತ್ರೆ ನಿರ್ಮಾಣಕ್ಕೆ ಐದು ಎಕರೆ ಜಾಗೆಯನ್ನು ಹಸ್ತಾಂತರ ಮಾಡುವ ನಿರ್ಣಯ ಕೈಗೊಳ್ಳುವದರ ಜೊತೆಗೆ, ಯಳ್ಳೂರ ಗ್ರಾಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಕ್ರಿಡಾಂಗಣ ನಿರ್ಮಿಸಲು 40 ಎಕರೆ ಭೂಮಿ ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ ಪ್ರಸ್ತಾವಣೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದ ಶಾಸಕ ಅಭಯ ಪಾಟೀಲ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸಕ್ತ ಬಜೆಟ್ ನಲ್ಲಿಯೇ ಅನುದಾನ ಪಡೆಯುವ ವಿಶ್ವಾಸ ವ್ಯೆಕ್ತಪಡಿಸಿದರು.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಹಾಪೂರ ಕಚೇರಿ ಗಲ್ಲಿ ಅನಗೋಳ,ಮತ್ತು ಹೊಸೂರಿನಲ್ಲಿ 30 ಬೆಡ್ ಗಳ ಆಸ್ಪತ್ರೆ ನಿರ್ಮಾಣಕ್ಕೆ ಯೋಜನೆ ರೂಪಿಸುವದರ ಜೊತೆಗೆ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಮಹಾನಗರ ಪಾಲಿಕೆಯ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರ ಮಾಡಿ,ಈ ಆಸ್ಪತ್ರೆಗಳ ಪುನಶ್ಚೇತನ ಮಾಡಲು ಯೋಜನೆ ರೂಪಿಸುವಂತೆ ಶಾಸಕ ಅಭಯ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ಮಚ್ಛೆ ಗ್ರಾಮದಲ್ಲಿ ಕನ್ನಡ, ಮರಾಠಿ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಒಂದು ಎಕರೆ ಜಮೀನು ನೀಡುವ ಕುರಿತು ಸಭಯಲ್ಲಿ ಚರ್ಚೆ ನಡೆಯಿತು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *