ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಅವರು ಕರ್ನಾಟಕ ಪ್ರವಾಸೋದ್ಯಮ ನಿಗಮದ ಅದ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ದೃಡಪಡಿಸಿವೆ
ಶಾಸಕ ಸೇಠ ಅವರು ಗುಂಡ್ಲುಪೇಟೆಯ ಚುನಾವಣೆಯ ಮೊದಲೇ ಪ್ರವಾಸೋದ್ಯಮ ನಿಗಮದ ಅದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿದೆ ಈಗಲೇ ಗೊಂದಲ ಬೇಡ ಎಂದು ಶಾಸಕ ಸೇಠ ಅವರಿಗೆ ಸಮಾಧಾನ ಪಡೆಸಿದ್ದರು ಎಂದು ಹೇಳಲಾಗಿದೆ
ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಪ್ರವಾಸೋದ್ಯಮ ನಿಗಮದ ಜವಾಬ್ದಾರಿ ವಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ ಹಿನ್ನಲೆಯಲ್ಲಿ ಉಪ ಚುನಾವಣೆಯ ಫಲಿತಾಂಶ ಮುಗಿದ ಬಳಿಕ ಶಾಸಕ ಸೇಠ ಅವರ ರಾಜಿನಾಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂಗೀಕರಿಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ
ಶಾಸಕ ಸೇಠ ಅವರು ಮುಂದಿನ ಮಂತ್ರಿಮಂಡಳದ ವಿಸ್ತರಣೆಯಲ್ಲಿ ತಮಗೂ ಮಂತ್ರಿ ಸ್ಥಾನ ನೀಡಬೇಕು ಪ್ರವಾಸೋದ್ಯಮ ನಿಗಮದ ಅದ್ಯಕ್ಷ ಸ್ಥಾನ ಬೇಡ ಎಂದು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದ್ದು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕರೊಬ್ಬರು ಸೇಠ ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ದೆಹಲಿಯಲ್ಲಿ ಲಾಬಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
ಇನ್ನೊಂದು ಕಡೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ತಮಗೆ ಮಂತ್ರಿ ಸ್ಥಾನ ಇಲ್ಲವಾದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ತಮಗೆ ಸ್ಥಾನಮಾನ ನೀಡುವ ವಿಷಯದಲ್ಲಿ ಜೂನ್ ಒಂದರೊಳಗಾಗಿ ಕಾಂಗ್ರೆಸ್ ಹೈಕಮಾಂಡ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಇಲ್ಲವಾದಲ್ಲಿ ನನ್ನ ದಾರಿ ನನಗೆ ನಿಮ್ಮ ದಾರಿ ನಿಮಗೆ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ
ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಇಂದು ರಾಯಚೂರ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವ ವಿಷಯ ಚರ್ಚೆಗೆ ಗ್ರಾಸವಾಗಿದೆ ಸತೀಶ ಜಾರಕಿಹೊಳಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಷಯ ಬೆಳಗಾವಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ