ಬಿಜೆಪಿ ತೆಕ್ಕೆಗೆ ವಿವೇಕರಾವ್ ಪಾಟೀಲ….
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿ
ನ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಈ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು.ವಿವೇಕರಾವ್ ಪಾಟೀಲ ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿಗೆ ವಿವೇಕರಾವ್ ಪಾಟೀಲ ಅವರನ್ನು ಭೇಟಿಯಾಗಿ ಸುಧೀರ್ಘ ಸಮಾಲೋಚನೆ ನಡೆಸಿದ ರಮೇಶ್ ಜಾರಕಿಹೊಳಿ ವಿವೇಕರಾವ್ ಪಾಟೀಲ ಅವರನ್ನು ಮನವೊಲಿಸುವಲ್ಲಿ ಸಫಲರಾಗಿದ್ದಾರೆ.
ವಿವೇಕರಾವ್ ಪಾಟೀಲ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು,ಅವರೂ ಪಕ್ಷೇತರಾಗಿ ಚುನಾವಣೆಗೆ ಸ್ಪರ್ದೆ ಮಾಡುತ್ತಾರೆ ಎನ್ನುವ ಸುದ್ದಿ ಪ್ರಚಾರ ಪಡೆದಿತ್ತು,ಆದ್ರೆ ವಿಧಾನ ಪರಿಷತ್ತಿನ ಚುನಾವಣೆಯನ್ನು ಗಂಭೀರವಾಗಿ ಪರಗಣಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಾದ್ಯಂತ ಮಿಂಚಿನ ಪ್ರಚಾರ ನಡೆಸಿದ್ದಾರೆ. ವಿವೇಕರಾವ್ ಪಾಟೀಲ ಅವರನ್ನು ಬಿಜೆಪಿ ತೆಕ್ಕೆಗೆ ತರುವ ಮೂಲಕ ರಮೇಶ್ ಜಾರಕಿಹೊಳಿ ಸಿಕ್ಸರ್ ಬಾರಿಸಿದ್ದಾರೆ.
ಬಿಜೆಪಿ ವರಿಷ್ಠರ ಒಪ್ಪಿಗೆ ಪಡೆದು ಆದಷ್ಟು ಬೇಗ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ರಮೇಶ್ ಜಾರಕಿಹೊಳಿ ಅವರು ನಿರ್ಧರಿಸಿದ್ದು ಅದಕ್ಕೆ ವಿವೇಕರಾವ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ
ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರನ್ನು ಗೆಲ್ಲಿಸುವ ಸಂಕಲ್ಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ವಿಚಾರವನ್ನು ಗಂಭೀರವಾಗಿ ಪರಗಣಿಸಿದ್ದಾರೆ.
ಇಂದು ಸಾಂಬ್ರಾದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸತ್ಕರಿಸಿದ 150 ಕ್ಕೂಹೆಚ್ವು ಗ್ರಾಮ ಪಂಚಾಯತಿ ಸದಸ್ಯರು ರಮೇಶ್ ಜಾರಕಿಹೊಳಿ ಅವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರ ನೀಡಿ ಗೌರವಿಸಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ