ಬೆಳಗಾವಿ-ವಿದಾನ ಪರಿಷತ್ತಿನಲ್ಲಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯ ಕುರಿತು ಧ್ವನಿ ಎತ್ತಿ ಹತ್ತು ಹಲವು ಯೋಜನೆಗಳನ್ನು ಮಂಜೂರು ಮಾಡಿಸಿ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿದ ಬೆಳಗಾವಿಯ ವಿಧಾನ ಪರಿಷತ್ತ ಸದಸ್ಯ ಮಹಾಂತೇಶ ಕವಟಗಿಮಠ ಅವರು ಜಿಲ್ಲೆಯ ಅಭಿವೃದ್ಧಿಯ ಪ್ರತಿಧ್ವನಿಯಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ
ಇಂದು ಮಹಾಂತೇಶ ಕವಟಗಿಮಠ ಅವರ ಹುಟ್ಟು ಹಬ್ಬದ ದಿನ ಅವರ ಅಭಿಮಾನಿಗಳಿಗೆ ಮತ್ತು ಹಿತೈಶಿಗಳಿಗೆ ಈ ಲೇಖನ ಸಮರ್ಪಣೆ ಮಾಡುತ್ತಿದ್ದೇವೆ
ಮಹಾಂತೇಶ ಕವಟಗಿಮಠ ಅವರು ವಿಧಾನ ಪರಿಷತ್ತಿನಲ್ಲಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಕುರಿತು ಧ್ವನಿ ಎತ್ತಿದ್ದಾರೆ ಗ್ರಾಮ ಪಂಚಾಯತಿ ಸದಸ್ಯರ ಗೌರವ ಧನ ಹೆಚ್ಚಳ,ಐಟಿ ಬಿಟಿ ಪಾರ್ಕ,ಖಾನಾಪೂರ ತಾಲೂಕಿನ ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವದು ಹದಿನೈದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೆ ಏರಿಸುವದು ಸೇರಿದಂತೆ ಹಲವಾರು ವಿಷಯಗಳ ಮೇಲೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತಿದ್ದಾರೆ
ವಿಧಾನ ಮಂಡಳದ ಅಧಿವೇಶನ ನಡೆದ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಪಟ್ಟಿ ಮಾಡಿ ವಿಧಾನ ಪರಿಷತ್ತಿನಲ್ಲಿ ಅವುಗಳನ್ನು ಪ್ರಸ್ತಾಪಿಸಿ ಸಮಸ್ಯೆಗಳ ಪರಿಹಾರಕ್ಕೆ ಮಹಾಂತೇಶ ಕವಟಗಿಮಠ ಅವರು ಶ್ರಮಿಸುತ್ತಿದ್ದಾರೆ
ಜೊತೆಗೆ ಕೆಲ್‍ಇ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಹೆಗಲಿಗೆ ಹೆಗಲು ಹಚ್ಚಿ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ ಅವರ ಸಾಮಾಜಿಕ ಕಾರ್ಯಗಳು ಮುಂದುವರೆಯಲಿ,ಅವರು ಮಾಡುತ್ತಿರುವ ಸೇವೆ ಸಾಕಾರಗೊಳ್ಳಲಿ ಎಂದು ಬೆಳಗಾವಿ ಸುದ್ಧಿ ಡಾಟ್ ಕಾಮ್ ಹಾರೈಸುತ್ತದೆ
Check Also
ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?
ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …