ಬೆಳಗಾವಿ- ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕಾಕಾಸಾಹೇಬ್ ಪಾಟೀಲ ಮದ್ಯರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮದ್ಯರಾತ್ರಿ 2-00 ಗಂಟೆಗೆ ನಿಧನರಾಗಿದ್ದು ಇಂದು ಮಧ್ಯಾಹ್ನ 3-00 ಗಂಟೆಗೆ ಕಾಕಾಸಾಹೇಬ್ ಪಾಟೀಲ ಅವರ ಸ್ವಗ್ರಾಮವಾದ ಚಿಕ್ಕೋಡಿ ತಾಲ್ಲೂಕಿನ ವಾಳಕಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ 1999, 2004 ಹಾಗೂ 2008 ರಲ್ಲಿ ಮೂರು ಬಾರಿ ಶಾಸಕರಾಗಿದ್ದ ಕಾಕಾಸಾಹೇಬ್ ಪಾಟೀಲ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದರು. ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರಾಗಿದ್ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ