*ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರಿಂದ ಜಲಸಂಪನ್ಮೂಲ ಸಚಿವ ಜಾರಕಿಹೊಳಿ ಭೇಟಿ;ವಿವಿಧ ವಿಷಯಗಳ ಕುರಿತು ಚರ್ಚೆ*
ಬೆಳಗಾವಿ,ಡಿ. 03(ಕರ್ನಾಟಕ ವಾರ್ತೆ): ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರನ್ನು ಗುರುವಾರ ಭೇಟಿ ಮಾಡಿ ಅಭಿನಂದಿಸಿದರು.
ನಂತರ ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂ.ಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ ರೈತರಿಂದ ಬಂದಂತಹ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು.
ಇದಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸಿದ ಮಾನ್ಯ ಸಚಿವರು ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಹಾಗೂ ಕೂಡಲೇ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದರು.
ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಂತೆ, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸುವಂತೆ, ಕಾಲುವೆಗಳನ್ನು ನಿರ್ಮಾಣ ಮಾಡಿಕೊಡುವಂತೆ, ಕಾಡ ಪ್ರಾಧಿಕಾರವನ್ನು ಮಾದರಿಯಾಗಿ ಮಾಡಲು, ರೈತರಿಗೆ ಸಾಕಷ್ಟು ರೀತಿಯಲ್ಲಿ ಅನುಕೂಲ ಮಾಡಿಕೊಡಲು ಮನವಿ ಸಲ್ಲಿಸಿದ ಕಾಡ ಅಧ್ಯಕ್ಷರು, ನಿಮ್ಮ ಎಲ್ಲಾ ರೀತಿಯ ಮನವಿಗಳನ್ನು ನಾನು ಆದ್ಯತೆ ಮೇರೆಗೆ ಕೈಗೊಳ್ಳಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನೆಲ ಮತ್ತು ಜಲ ನಿರ್ವಹಣೆ ನಿರ್ದೇಶಕರಾದ ರಾಜೇಂದ್ರ ಪೋದ್ದರ್ ಅವರು, ಮಲಪ್ರಭಾ ನೀರು ಬಳಕೆದಾರರ ಮಹಾ ಮಂಡಲದ ಅಧ್ಯಕ್ಷರಾದ ಅಶೋಕ್ ಕಂದ್ರತ್ತಿ ಅವರು, ನೆಲ ಮತ್ತು ಜಲ ನಿರ್ವಹಣೆ ಸಿಬ್ಬಂದಿ ಸುರೇಶ್ ಕುಲಕರ್ಣಿ ಅವರು ಉಪಸ್ಥಿತರಿದ್ದರು.
—
Check Also
ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??
ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …