Breaking News

ಬೆಳಗಾವಿಯಲ್ಲಿ ಕೊರೊನಾ‌ ಯೋಧರಿಗೆ ಸನ್ಮಾನ

ಬೆಳಗಾವಿ -: ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಮುಖ್ಯ ಉದ್ದೇಶ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಆದರೆ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗುವ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕಿವಿಮಾತು ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ‌ ಶಾಖೆ, ಗೃಹರಕ್ಷಕದಳ ಮತ್ತು ಪೌರರಕ್ಷಣೆ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಡಿ.10) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮತ್ತು ಕರೋನಾ ಯೋಧರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಕ್ಕುಗಳಿಂದ ವಂಚಿತರಾದವರು, ಅತ್ಯಾಚಾರಕ್ಕೆ ಒಳಗಾದವರು, ಅಂಗವಿಕಲರು, ಬಾಲ ಕಾರ್ಮಿಕರು, ವಯೋವೃದ್ದರನ್ನು, ಎಚ್.ಐ.ವಿ ಪೀಡಿತರನ್ನು ನಾವೆಲ್ಲರೂ ಸಹನಾಭೂತಿಯಿಂದ ಹಾಗೂ ಇತರರಂತೆ ಸಮಾನವಾಗಿ ನೋಡಬೇಕು.

ಎಷ್ಟೋ ಜನರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವಿಲ್ಲ. ಅಂತಹವರ ವಿವಿಧ ಬಗೆಯ ದೌರ್ಜನ್ಯಗಳನ್ನು ಸಹಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ವರ್ಗದವರಿಗೆ ಹಕ್ಕಿನ ಅರಿವು ಮೂಡಿಸಿ ರಕ್ಷಣೆ ಮಾಡುವ ಕಾರ್ಯ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿಯಾದ ವಿಜಯ ದೇವರಾಜ ಅರಸ ಅವರು ಮಾತನಾಡಿ, ಸಂವಿಧಾನ ನಮ್ಮೆಲ್ಲರಿಗೂ ಮೂಲಭೂತ ಸಮಾನ ಹಕ್ಕುಗಳನ್ನು ನೀಡಿದೆ. ಹಕ್ಕುಗಳ ಉಲಂಘನೆಯಾದರೆ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿದರು.

ಶಾಲಾ- ಕಾಲೇಜು ಸೇರಿದಂತೆ ಪ್ರತಿ ಹಳ್ಳಿ ನಗರಗಳಿಗೆ ತೆರಳಿ, ಹಕ್ಕುಗಳ ಉಲಂಘನೆಯಾದಲ್ಲಿ ಸೂಕ್ತ ರೀತಿಯ ಕಾನೂನು ಸಲಹೆ ನೀಡಿ, ಎಲ್ಲರಲ್ಲಿಯೂ ಹಕ್ಕುಗಳ ಅರಿವು ಮೂಡಿಸುವ ಕಾರ್ಯವನ್ನು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಅಧ್ಯಕ್ಷ ಅಶೋಕ ಬದಾಮಿ, ಸಮಾನವಾಗಿ ಜೀವಿಸುವ ಹಕ್ಕು ಪ್ರತಿಯೊಬ್ಬರಿಗಿದೆ. ಮಾನವ ಹಕ್ಕುಗಳ ಸರಿಯಾದ ಪಾಲನೆ ಆಗಬೇಕಾದರೆ ಎಲ್ಲರಿಗೂ ಶಿಕ್ಷಣ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸಾಮಾಜಿಕ ಅಂತರ ಮತ್ತು ಸ್ವಚ್ಚತೆ ಕಾಪಾಡುವ ಮೂಲಕ ಕೋವಿಡ್ 19 ವಿರುದ್ದ ಒಗ್ಗಟ್ಟಾಗಿ ಹೋರಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ಹೇಳಿದರು.

ಕೊರೊನಾ‌ ಯೋಧರಿಗೆ ಸನ್ಮಾನ:

ಇದೇ ಸಂದರ್ಭದಲ್ಲಿಕೋವಿಡ್ 19 ವಿರುದ್ದ ಹೋರಾಡಿದ ಕರೋನಾ ಯೋಧರಿಗೆ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಗೃಹರಕ್ಷಕದಳ ಮತ್ತು ಪೌರರಕ್ಷಣೆ ಇಲಾಖೆಯ ಕಮಾಂಡೆಂಟ್ ಡಾ.ಕಿರಣ ರುದ್ರಾ ನಾಯ್ಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಡಿ.ಎನ್.ಮಿಸಾಳೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಗೃಹರಕ್ಷಕದಳ ಮತ್ತು ಪೌರ ರಕ್ಷಣೆ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು‌‌.

ಕೋವಿಡ್-೧೯ ಅರಿವು ಜಾಥಾ:

ಕಾರ್ಯಕ್ರಮಕ್ಕೂ ಮುಂಚೆ ರೆಡ್ ಕ್ರಾಸ್ ಸ್ವಯಂಸೇವರು, ಗೃಹರಕ್ಷಕ ದಳದ ವತಿಯಿಂದ ಕೋವಿಡ್ 19 ಅರಿವು ಜಾಗೃತಿ ಜಾಥಾ ನಡೆಯಿತು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಆರಂಭಗೊಂಡ ಅರಿವು ಜಾಥಾಗೆ ಜಿಲ್ಲಾಧಿಕಾರಿ ಹಿರೇಮಠ ಅವರು ಚಾಲನೆ ನೀಡಿದರು.
ಜಾಥಾವು ಕಿತ್ತೂರ ಚನ್ನಮ್ಮ ವೃತ್ತದ ಮೂಲಕ ಜಿಲ್ಲಾ ಪಂಚಾಯತ ಕಾರ್ಯಾಲಯವನ್ನು ತಲುಪಿತು.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *