ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಸುರಿದು ರಣಬಿಸಿಲು ಬಿದ್ದಮೇಲೆ ಒಂದರ ಮೇಲೊಂದು ಅವಾಂತರ ನಡೆಯುತ್ತಲೇ ಇದೆ.ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬೆನ್ನೂರ ಗ್ರಾಮದಲ್ಲಿ ನಡೆದಿದೆ.
ಹೊಸಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರಿಗೆ ವಾಂತಿ ಭೇದಿ ಪ್ರಾರಂಭವಾಗಿದೆ.40 ಜನರಲ್ಲಿ 13 ಜನ ತೀವ್ರ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಮದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು ಚೇತರಿಸಿಕೊಳ್ಳುತ್ತಿದ್ದಾರೆ.
ಸರ್ಕಾರದ ಕುಡಿಯುವ ನೀರಿನ ಯೋಜನೆಯ ಹೊಸ ಪೈಪ್‌ಲೈನ್ ಕಲುಷಿತ ನೀರು ಸೇರುತ್ತಿದೆ.
ವಾಲ್ ಕಟ್ ಆದ ಪರಿಣಾಮ ಪೈಪ್‌ಲೈನಿಗೆ ಹೊಕ್ಕಿದ ಚರಂಡಿ ನೀರು,ಸೇವಿಸಿ ಗ್ರಾಮಸ್ಥರು ಹೈರಾಣಾಗಿದ್ದಾರೆ.
ನಳದಲ್ಲಿ ಬಂದ ಕಲುಷಿತ ನೀರು ಸೇವಿಸಿದ 40 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದುವಿಷಯ ತಿಳಿದು ಗ್ರಾಮಕ್ಕೆ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಭೇಟಿ, ಪರಿಶೀಲನೆ ನಡೆಸಿದ್ದಾರೆ.ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಮನೆ ಮನೆಗೆ ಮಾತ್ರೆ ವಿತರಣೆ ಮಾಡಲಾಗಿದೆ.