ಬೆಳಗಾವಿ-ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದೆ.ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ.
ಬೆಳಗಾವಿ ತಾಲೂಕಿನ ಬಡಕೊಳ್ಳಿ ಕ್ರಾಸ್ ಬಳಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬೆಳಗಾವಿಯಿಂದ ಹಿರೇಕೆರೂರಗೆ ಹೋಗುತ್ತಿದ್ದ ಸರ್ಕಾರಿ ಬಸ್,
ಮಳೆಯಿಂದ ರಸ್ತೆ ಕಾಣದೇ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡ್ತಿದ್ದ 35ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಪ್ರಯಾಣಿಕರಿಗೆ ಬೇರೊಂದು ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					