Breaking News
Home / Breaking News / ವೈರಲ್ ಆಗಿದ್ದ ಅಡಿಯೋ ಸ್ವಾಮಿಜಿ ಆತ್ಮಹತ್ಯೆಗೆ ಕಾರಣವಾಯಿತಾ..??

ವೈರಲ್ ಆಗಿದ್ದ ಅಡಿಯೋ ಸ್ವಾಮಿಜಿ ಆತ್ಮಹತ್ಯೆಗೆ ಕಾರಣವಾಯಿತಾ..??

ಬೆಳಗಾವಿ-ನೇಗಿನಹಾಳ ಗ್ರಾಮದ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೆಗಿನಹಾಳ ಗ್ರಾಮದಲ್ಲಿ,ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ,ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಡಿವಾಳೇಶ್ವರ ಮಠದಲ್ಲೇ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು,ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಬಳಿಕ ಅಡಿಯೋ ವೈರಲ್ ಆಗಿತ್ತು,ಇದೇ ವಿಚಾರ ಆತ್ಮಹತ್ಯೆಗೆ ಕಾರಣವಾಯಿತಾ..?? ಎನ್ನುವದು ಸ್ಪಷ್ಟವಾಗಬೇಕಿದೆ.ಈ ಆಡಿಯೋದಲ್ಲಿ ಸದ್ಯ ಆತ್ಮಹತ್ಯೆ ಮಾಡಿಕೊಂಡ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರು ಉಲ್ಲೇಖವಾಗಿತ್ತು ಎಂಬ ಮಾಹಿತಿ ಇದೆ.ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

2007 ರಲ್ಲಿ ಮಡಿವಾಳೇಶ್ವರ ಪೀಠ ಅಲಂಕರಿಸಿದ್ದ ಬಸವಸಿದ್ಧಲಿಂಗ ಸ್ವಾಮೀಜಿ,15 ವರ್ಷಗಳಿಂದ ಮಡಿವಾಳೇಶ್ವರ ಪೀಠಾದಿಪತಿ ಆಗಿದ್ದರು.ನಿನ್ನೆ ತಡರಾತ್ರಿವರೆಗೂ ಭಕ್ತರ ಜೊತೆಗೆ ಮಾತುಕತೆ ನಡೆಸಿದ್ದರು.ಎಂದಿನಂತೆ ಸಹಜವಾಗಿದ್ದ ಸ್ವಾಮೀಜಿ ದಿಢೀರ್ ಆತ್ಮಹತ್ಯೆಗೆ ಶರಣಾಗಿದ್ದು ಭಕ್ತರಿಗೆ ಶಾಕ್ ಆಗಿದೆ.ಸೇವಕರು ಬೆಳಗ್ಗೆ ಸ್ವಾಮೀಜಿ ಕೋಣೆಗೆ ಹೋದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ನೆಗಿನಹಾಳ ಗ್ರಾಮದಲ್ಲೀಗ ಸ್ಮಶಾನ ಮೌನ,ಆವರಿಸಿದೆ.ಸ್ಥಳಕ್ಕೆ ಬೈಲಹೊಂಗಲ ಡಿವೈಎಸ್‌ಪಿ ಶಿವಾನಂದ ಕಟಗಿ ಭೇಟಿ ನೀಡಿದ್ದಾರೆ.

Check Also

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ …

Leave a Reply

Your email address will not be published. Required fields are marked *