ಬೆಳಗಾವಿ- ಬೆಳಗಾವಿಯಲ್ಲಿ ಬೆಳಗ್ಗೆಯಿಂದ ಸಾರಿಗೆ ನೌಕರರ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ
ಓಡಾಡುತ್ತಿದ್ದ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಕೋಟೆ ಕೆರೆ ಬಳಿ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ ಬೆಳಗಾವಿ- ಸಂಕೇಶ್ವರ ಮಾರ್ಗದ ಬಸ್ ಮೇಲೆ ಕಲ್ಲು ತೂರಾಟ ನಡೆದಿದ್ದು ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ.
ಬೆಳಗಾವಿ ಕೇಂದ್ರ ಬಸ್ ನಿಲ್ಧಾಣದಲ್ಲಿ ಸಾರಿಗೆ ನೌಕರರು ಬಸ್ ನಿಲ್ಲಿಸಿ ಹೋರಾಟ ಮಾಡುತ್ತಿರುವ ಸಮಯದಲ್ಲೇ ಬಸ್ ನಿಲ್ಧಾಣದಿಂದ ಕೂಗಳತೆಯ ದೂರದಲ್ಲಿರುವ ಅಶೋಕ ವೃತ್ತದ ಬಳಿ ಬೆಳಗಾವಿಯಿಂದ ಸಂಕೇಶ್ವರಕ್ಕೆ ಹೊರಟಿದ್ದ ಬಸ್ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ