ಬೆಳಗಾವಿ-ಸಾರಿಗೆ ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ. ಆಗ ನಾನು ಯಾರ ಜೊತೆಗಾದ್ರು ಮಾತನಾಡಲು ಸಿದ್ದ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾರಿಗೆ ನೌಕರರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು,ಮುಷ್ಕರದ ಬಗ್ಗೆ ೯ ಬೇಡಿಕೆಗಳ ಪೈಕಿ ೮ ಈಡೇರಿಸಿದ್ದೇವೆ. ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ. ಖಾಸಗಿಯವರು ಹೆಚ್ಚಿಗ ಹಣ ಪಡೆದ್ರೆ ಕ್ರಮ ಕೈಗೊಳ್ಳುತ್ತೇವೆ. ಅವರಿಗೂ ಮನವಿ ಮಾಡುವೆ ಜನರ ಸುಲಿಗೆ ಮಾಡಬೇಡಿ ಎಂದು ಮನವಿ ಮಾಡುವೆ. ಎಸ್ಮಾ ಜಾರಿಗೆ ಚಿಂತನೆ ಮಾಡುತ್ತಿದ್ದೇವೆ ಪರಿಸ್ಥಿತಿಯನ್ನು ನೋಡಿ ತೀರ್ಮಾಣ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು.ಸಾರಿಗೆ ಮುಷ್ಕರವನ್ನು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ,ಹಠ ಮಾಡುವದು ಸರಿಯಲ್ಲ ಎಂದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ