Breaking News

ನೇಕಾರ ಕುಟುಂಬಗಳಿಗೆ ಸಾಂತ್ವನ ಹೇಳಿದ ಸಾಹುಕಾರ್…

ವಡಗಾಂವ ನೇಕಾರ ಸಮಾಜದ ಮೂವರು ಆತ್ಮಹತ್ಯೆ: ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ, ಮೃತರ ಕುಟುಂಬಕ್ಕೆ ಪರಿಹಾರ ಕಲ್ಪಿಸುವುದಾಗಿ ಭರವಸೆ ..! ಬೆಳಗಾವಿ: ಸಾಲದ ಬಾದೆ ತಾಳಲಾದರೆ ಆತ್ಮಹತ್ಯೆಗೆ ಶರಣಾದ ದಕ್ಷಿಣ ಮತಕ್ಷೇತ್ರದ ವಡಗಾಂವ ನೇಕಾರ ಸಮಾಜ ಮೂವರು ಮೃತ ಕುಟುಂಬಸ್ಥರ ಮನೆಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ, ನೊಂದ ಕುಟುಂಬಕ್ಕೆ ಸ್ವಾಂತನ ಹೇಳಿದರು.

ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ದಕ್ಷಿಣ ಮತಕೇತ್ರ ವ್ಯಾಪ್ತಿಯ ವಡಗಾಂವ ನೇಕಾರ ಸಮಾಜ ಪಾಂಡು ಉಪರಿ , ಗಣಪತಿ ಬುಚಡಿ ಸಾವನಪ್ಪಿಸಿದ್ದರು . ಈ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ, ದೈರ್ಯದಿಂದ ಜೀವನ ಸಾಗಿಸಬೇಕು. ಕುಟುಂಬವನ್ನು ಚೆನ್ನಾಗಿ ನೋಡಿಕೊಂಡು ಸಾಗಬೇಕು. ನಿಮಗೆಲ್ಲ ಸಹಕಾರ ನೀಡುವುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಮೃತ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಹಾಗೂ ಸೌಲಭ್ಯ ಕಲ್ಪಿಸಿ ಕೋಡುವುದಾಗಿ ಭರವಸೆ ನೀಡಿದ್ದಾರೆ.

ನೊಂದ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸತೀಶ ಜಾರಕಿಹೊಳಿ:

ಈ ವೇಳೆ ಮೃತನ ಪತ್ನಿ ಮಾತನಾಡಿ, ಇಲ್ಲಿನ ಶಾಸಕರು, ನಗರ ಸೇವಕರು ನಮ್ಮ ಕಷ್ಟಗಳಿಗೆ ಸ್ಪಂದಿಸುವುದಿಲ್ಲ. ಇಲ್ಲಿವರೆಗೂ ಪರಿಹಾರ ನೀಡಿಲ್ಲವೆಂದು ಕಣ್ಣಿರಿಟ್ಟರು. ಕೊರೋನಾ ಹಾಗೂ ಮಳೆಯಿಂದ ಸಾಕಷ್ಟು ಸಮಸ್ಯೆಗಳಾಗಿವೆ. ಈ ವೇಳೆ ಸಾಲ ಮಾಡಿ ನೇಕಾರಿಕೆ ಮಾಡಿದ ಮನೆಯವರು ಮನನೊಂದು ಮೃತಪಟ್ಟಿದ್ದಾರೆ. ನಮ್ಮ ಕಷ್ಟಗಳನ್ನು ಸ್ಥಳೀಯ ಶಾಸಕರು ಆಲಿಸುತ್ತಿಲ್ಲ, ಕೊರೋನಾ ಸಂಕಷ್ಟದಲ್ಲಿ ಮೂರು ತಿಂಗಳ ಕಾಲ ಆಹಾರ ವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾದರೂ ಯಾರೋಬ್ಬರು ಸಹಕಾರ ನೀಡಲಿಲ್ಲ.

ಸ್ಥಳೀಯ ಶಾಸಕರು ನೋವಿಗೆ ಧ್ವನಿಯಾಗಲಿಲ್ಲ ಎಂದು ಮೃತನ ಪತ್ನಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮುಂದೆ ಅಳಲು ತೊಡಿಕೊಂಡಿದ್ದಾರೆ. ನಿಮ್ಮೆಲ್ಲ ಕಷ್ಟಗಳಿಗೆ ಸ್ಪಂಧಿಸುವುದಾಗಿ ಭರವಸೆ ನೀಡಿದರು. ನಿಮಗೆ ಬೇಕಾದ ಅಗತ್ಯ ವಸ್ತುಗಳನ್ನು ಕಲ್ಪಿಸುವುದಾಗಿ ಧೈರ್ಯ ಹೇಳಿದ್ದಾರೆ.

ಬೆಳಗಾವಿ ದಕ್ಷಿಣ ಮತಕೇತ್ರದ ಜನರ ಸಮಸ್ಯೆ ಆಲಿಸಿದ ಸತೀಶ ಜಾರಕಿಹೊಳಿ:

ಈ ವೇಳೆ ಬೆಳಗಾವಿ ದಕ್ಷಿಣ ಮತಕೇತ್ರ ವ್ಯಾಪ್ತಿಯ ಧಾರಾಕಾರವಾಗಿ ಮಳೆ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದ ಭತ್ತ ನೀರಲಿ ಮುಳಗಿ ಸಮಸ್ಯೆ ಸಿಲುಕ್ಕಿದ್ದಾರೆ. ಈ ಹಿನ್ನಲೆಯಲ್ಲಿ ಸತೀಶ ಜಾರಕಿಹೊಳಿ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಮಳೆಯಲ್ಲಿ ಕ್ಷೇತ್ರ ದ ದರ್ಶನ ಮಾಡಿ, ಮಳೆಯಿಂದ ಆಗಿರುವ ಅನಾಹುತಗಳನ್ನು, ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ, ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆ ಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಕ್ಷೇತ್ರದಲ್ಲಿ ರೈತರ ಅಳಲು:

ರೈತರ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಬೀಜ, ಗೊಬ್ಬರ ಖರೀದಿ ಮಾಡುವ ವಿಷಯದಲ್ಲಿ ರೈತ ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತಾಗಬೇಕಾಗಿದೆ ಎಂದು ಸ್ಥಳೀಯ ರೈತರು ಅಳಲು ತೊಡಿಕೊಂಡರು. ನಿಮ್ಮೆಲ್ಲ ಸಮಸ್ಯೆಗಳಿಗೆ ಸ್ಪಂಧಿಸಲು ಅಧಿಕಾರಿಗಳ ಜತೆ ಚರ್ಚೆ ಮಾಡಲಾವುದು ಸತೀಶ ಜಾರಕಿಹೊಳಿ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪರಶುರಾಮ ದಗೆ, ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರದೀಪ ಎಂ ಜಿ. ರಾಘು ಬೋವಿ, ಕಾರ್ಯಕರ್ತರು ಹಾಗೂ ಇತರರು ಇದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *