ಬೆಳಗಾವಿ- ಬೆಳಗಾವಿ ನಗರದಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು
ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ಹೊರಡಿಸಿದ ವಿಧ್ಯಾರ್ಥಿಗಳು ಕಾಲೇಜಿಗೆ ಮೂಲಭೂತ ಸೌಕರ್ಯ ಒದಗಿಸದ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು
ಕಾಲೇಜಿನ ಹೊಸ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಬೇಕು ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೊಡಬೇಕು ಅಲ್ಲಿಯವರೆಗೆ ಕಾಲೇಜಿನಲ್ಲಿ ಶೌಚಾಲಯ ನಿರ್ಮಿಸಿ ಕುಡಿಯುವ ನೀರಿನ ವ್ಯೆವಸ್ಥೆ ಮಾಡಬೇಕು ವಿಶ್ರಾಂತಿ ಕೊಠಡಿ ಮತ್ತು ಗ್ರಂಥಾಲಯ ಆರಂಭಿಸುವದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ವಿಧ್ಯಾರ್ಥಿಗಳು ಒತ್ತಾಯ ಮಾಡಿದರು
ಕಂಪ್ಯುಟರ್ ಲ್ಯಾಬ್ ತೆರೆದು ಪುಸ್ತಕಗಳನ್ನು ಸಕಾಲಕ್ಕೆ ದೊರಕಿಸಲು ಕ್ರಮ ಕೈಗೊಳ್ಳಬೇಕೆಂದು ವಿಧ್ಯಾರ್ಥಿಗಳು ಆಗ್ರಹ ಪಡಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ