Breaking News

ಜಿಲ್ಲೆಯಿಂದ ಜಿಲ್ಲೆಗೆ,ರಾಜ್ಯದಿಂದ ರಾಜ್ಯಕ್ಕೆ ಹೋಗಲು ಎಲ್ಲಿ ಅರ್ಜಿ ಸಲ್ಲಿಸಬೇಕು ಗೊತ್ತಾ….???

ಅಂತರ್ ಜಿಲ್ಲಾ ಸಂಚಾರಕ್ಕೆ ಪಾಸ್: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು.

ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಪಾಸ್ ಗಳನ್ನು ನೀಡುವರು.
ಅದೇ ರೀತಿ ಬೆಳಗಾವಿ ನಗರ ಮತ್ತು ಬೆಳಗಾವಿ ತಾಲ್ಲೂಕಿನ ಪ್ರದೇಶದಲ್ಲಿರುವ ಜನರಿಗೆ ಉಪ ಪೊಲೀಸ್ ಆಯುಕ್ತರು(ಡಿಸಿಪಿ) ಪಾಸ್ ಗಳನ್ನು ನೀಡಲಿದ್ದಾರೆ.

ಅರ್ಜಿ ಎಲ್ಲಿ ಸಲ್ಲಿಸಬೇಕು?

ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಜನರು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಬೆಳಗಾವಿ ಇವರಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅದೇ ರೀತಿ ಉಳಿದ ತಾಲ್ಲೂಕಿನಲ್ಲಿ ಇರುವವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಮತ್ತಿತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿದ್ದರೆ ಆಯಾ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ತಾಲ್ಲೂಕು ವ್ಯಾಪ್ತಿಯಲ್ಲಿ ಇರುವವರು ಆಯಾ ತಹಶಿಲ್ದಾರರ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

** ಹೊರ ರಾಜ್ಯ ಪ್ರವಾಸಕ್ಕೆ ಪಾಸ್ ಪಡೆಯುವ ವಿಧಾನ:

ಬೆಳಗಾವಿ ಜಿಲ್ಲೆಯಲ್ಲಿರುವ ಬೇರೆ ರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಇತರೆ ರಾಜ್ಯಗಳಿಗೆ ತೆರಳಲು ಬಯಸಿದರೆ ಕರ್ನಾಟಕ ಸರ್ಕಾರದ ಸೇವಾಸಿಂಧು ಯೋಜನೆಯ https://sevasindhu.karnataka.gov.in/Sevasindhu/English
ವೆಬ್‌ಸೈಟ್ ಮೂಲಕ ತಮ್ಮ ಹೆಸರು , ವಿವರಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಮಾರ್ಗಸೂಚಿ ಅನುಸಾರ ಪ್ರಯಾಣಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *