ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ತುರ್ತು ಭೂಸ್ಪರ್ಶಗೊಂಡಿದೆ. ಇದರಿಂದ ಅವರು ದೊಡ್ಡ ಅಪಘಾತದಿಂದ ಪಾರಾಗಿದ್ದಾರೆ.
ರಣಹದ್ದು ಬಡಿದ ಕಾರಣ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ.
ಹೆಲಿಕಾಪ್ಟರ್ ವಿಂಡೋ ಗಾಜು ಪುಡಿಪುಡಿ ಗೊಂಡಿದೆ. ಶಿವಕುಮಾರ್ ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಅವರು ಈಗ ರಸ್ತೆ ಮಾರ್ಗವಾಗಿ ಮುಳಬಾಗಿಲು ಮೂಲಕ ತೆರಳಿದ್ದಾರೆ.
ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದಿದೆ. ಆ ಸಂದರ್ಭದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ