Breaking News

ಹಾ.! ಹಾ..!! ಅಭ್ಯರ್ಥಿಗಳಿಂದ ಮದುವೆ ಮಾಡಿಸುವ ಗ್ಯಾರಂಟಿ..!!

ಮದುವೆಯಾಗದ ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ ಕರುಣಿಸಲಾಗುವುದು 

ಬೆಳಗಾವಿ :
ಗೋಕಾಕ ಹಾಗೂ ಅರಬಾವಿಯಲ್ಲಿ ಪಕ್ಷೇತರ ಸಹೋದರರಿಬ್ಬರೂ(ಕುಳ್ಳೂರ) ಕಣಕ್ಕಿಳಿದಿದ್ದು ಅವರು ನೀಡಿರುವ ಚುನಾವಣಾ ಪ್ರಣಾಳಿಕೆಯ ಭರವಸೆ ವಿಶೇಷ ರೀತಿಯಲ್ಲಿ ಗಮನ ಸೆಳೆದಿದೆ.

ಗೋಕಾಕ ಹಾಗೂ ಅರಬಾವಿ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆಗೊಳಿಸಿರುವ ಪ್ರಣಾಳಿಕೆ ಇದೀಗ ನಾಡಿನೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಅರಬಾವಿ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಮತ್ತು ಗೋಕಾಕ ಮತ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲಿಕ ಕುಳ್ಳೂರ ವಧು ವರರಿಗೆ ಮದುವೆ ಭಾಗ್ಯ ಘೋಷಣೆ ಮಾಡಿದ್ದಾರೆ. ಮದುವೆಯಾಗದವರಿಗೆ ಮದುವೆ ಮಾಡಿಸುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.

ಗುರುಪುತ್ರ ಕೆಂಪಣ್ಣ ಕುಳ್ಳೂರ ಅರಭಾವಿ ಮತಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಪುಂಡಲೀಕ ಕುಳ್ಳೂರ ಗೋಕಾಕ ಮತಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.

ಕ್ಷೇತ್ರದ ಮದುವೆಯಾಗದ, ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸಲಾಗುವುದು. ಇದು 100% ಗ್ಯಾರಂಟಿ ಎಂದು ತಮ್ಮ ಪ್ರಚಾರದ ಕರಪತ್ರದಲ್ಲಿ ಪ್ರಕಟಿಸಿದ್ದಾರೆ. ಈ ಭರವಸೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗುತ್ತಿದೆ.

Check Also

ನಗರದ ಹೊರವಲಯದ ಮನೆಯಲ್ಲಿ ಕೊಳೆತ ಎರಡು ಶವ ಪತ್ತೆ….

ಅಥಣಿ- ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವಗಳು ಪತ್ತೆಯಾಗಿವೆ.ಅಥಣಿ ಪಟ್ಟಣದ ಮದಭಾವಿ ರಸ್ತೆ ಚೌವ್ಹಾಣ್ ತೋಟದಲ್ಲಿ ಜೋಡಿ ಶವಗಳು ಪತ್ತೆಯಾಗಿವೆ. …

Leave a Reply

Your email address will not be published. Required fields are marked *