ಪಾಸಿಟೀವ್ ಇದ್ದ ರಿಪೋರ್ಟ್ ನೆಗೆಟೀವ್ 11 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ.

ಬಿಡುಗಡೆ ಹೊಂದಿದವರ ವಿವರ:

ಕ್ಯಾಂಪ್ ಪ್ರದೇಶ –
ಪಿ-355
ಪಿ-356
ಪಿ-358
ಪಿ-359

ಕುಡಚಿ-
ಪಿ-296
ಪಿ-297
ಪಿ-299
ಪಿ-301

ಸಂಕೇಶ್ವರ- ಪಿ-293; ಯಳ್ಳೂರ ಪಿ-295 ಹಾಗೂ ಹಿರೇಬಾಗೇವಾಡಿ ಪಿ-193.

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.
***

Check Also

ಗಣೇಶ್ ಪ್ರತಿಷ್ಠಾಪನೆ ಮಾಡಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್…..!

ಬೆಳಗಾವಿ – ತೆಲೆಯ ಮೇಲೆ ಗಾಂಧಿ ಟೊಪ್ಪಗಿ,ಹಣೆಯ ಮೇಲೆ ನಾಮ, ಕೇಸರಿ ಝುಬ್ಬಾ ಹಾಕಿಕೊಂಡು ಗಣೇಶ ಮೂರ್ತಿಗೆ ಆರತಿ ಬೆಳಗಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.