ಬೆಳಗಾವಿ- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ,ಬೆಳಗಾವಿ ಜಿಲ್ಲೆಯಿಂದ ಇಬ್ಬರು ಮಂತ್ರಿಗಳಾಗಿದ್ದಾರೆ.ಈ ಇಬ್ವರು ಮಂತ್ರಿಗಳು ನಾಳೆ ಮಂಗಳವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಲೋಕೋಪಯೋಗಿ ಸಚಿವ. ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿಯಲ್ಲಿ ಬೆಳಗ್ಗೆ 11-00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮೊದಲ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಸಕರು,ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸುತ್ತಾರೆ. ಎಲ್ಲ ಇಲಾಖೆಗಳ ಕಾರ್ಯವೈಖರಿ,ಕಾಮಗಾರಿಗಳ ಪ್ರಗತಿ ಪರಶೀಲನೆ ನಡೆಯಲಿದ್ದು ಇಬ್ಬರು ಮಂತ್ರಿಗಳು ನಡೆಸುತ್ತಿರುವ ಮೊದಲ ಸಭೆಯಲ್ಲಿ ಅಧಿಕಾರಿಗಳಿಗೆ ಯಾವರೀತಿ ಪಾಢ ಹೇಳ್ತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ.
ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ,ಜೊತೆಗೆ ಬೀತ್ತನೆ ಕಾರ್ಯವೂ ಜೋರಾಗಿ ನಡೆಯುತ್ತಿದೆ.ಬೀತ್ತನೆ ಬೀಜ ರಸಗೊಬ್ಬರದ ಲಭ್ಯತೆಯ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ