ಬೆಳಗಾವಿ- ರಾತ್ರೋ ರಾತ್ರಿ 11-30 ಕ್ಕೆ ಸ್ಪೇಶಲ್ ಫ್ಲಾಯಿಟ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಳಗಾವಿಗೆ ದೌಡಾಯಿಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಿದ್ದಾರೆ.
ಅಥಣಿ ಶಾಸಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ,ಅವರು ಚುನಾವಣೆಯಲ್ಲಿ ಗೆದ್ದರೂ ಸಹ ಅವರು ಮಂತ್ರಿ ಮಂಡಲದಲ್ಲಿ ಸ್ಥಾನ ಗಿಟ್ಟಿಸಿಕೊಂಡಿಲ್ಲ.ಅವರನ್ನು ಭೇಟಿಯಾಗಲು,ಸಮಾಧಾನಪಡಿಸಲು ಡಿ.ಕೆ ಶಿವಕುಮಾರ್ ಬೆಳಗಾವಿಗೆ ದೌಡಾಯಿಸಿದ್ದಾರೆ.
ಬುಧವಾರ ಬೆಳಗ್ಗೆ 8-00 ಗಂಟೆಗೆ ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಂತರ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಲು ಹುಬ್ಬಳ್ಳಿಗೆ ತೆರಳಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ