ಚಿಕ್ಕೋಡಿ :ಮಂಗಳಮುಖಿಯರು ಬಸ್ ನಿಲ್ದಾಣದಲ್ಲಿ ನಿಂತು ಬಸ್ ಬಂದಾಗ ಬಸ್‌ಗೆ ಕೈ ಮಾಡಿದರು ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಬಸ್ ತಡೆದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ನಡೆದಿದೆ.
ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಅದರಲ್ಲಿ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಮಂಗಳಮುಖಿಯರನ್ನು ಕರೆದುಕೊಂಡು ಹೋಗಬೇಕಾಗಿತ್ತು. ಆದರೆ, ಬಸ್ ನಿಲ್ಲಿಸದೆ ಅವರನ್ನು ಕಡೆಗಣಿಸಿ ಹೋಗಿದ್ದು ಖಂಡನೀಯ. ನಾವು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿದ್ದೇವೆ ನಾವು ಕೂಡ ಮನುಷ್ಯರೇ ಎಂದು ಮಂಗಳಮುಖಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					