ಬೆಳಗಾವಿ-ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ವಲಯದಲ್ಲೂ ಭರ್ಜರಿ ತಯಾರಿ ನಡೆದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಘಟಾನುಘಟಿ ನಾಯಕರು ಕಸರತ್ತು ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುತ್ತಾರೆ ಎನ್ನುವ ಸುದ್ಧಿ ಹರಿದಾಡುತ್ತಿದೆ.ಆದ್ರೆ ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದು,ಲಿಂಗಾಯತ ಸಮುದಾಯದ ಪ್ರಭಾವಿ ಯುವ ನಾಯಕ ಕಿರಣ ಸಾಧುನವರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.ಎಂದು ಹೇಳಲಾಗುತ್ತಿದೆ.ಜಿಲ್ಲಾ ಉಸ್ತುವಾರಿ, ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸೂಚಿಸುವ ಅಭ್ಯರ್ಥಿಯೇ ಒಮ್ಮತದ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದು, ಸತೀಶ್ ಜಾರಕಿಹೊಳಿ ಅವರು ಕಿರಣ ಸಾಧುನವರ ಅವರ ಬಗ್ಗೆ ಹೆಚ್ವಿನ ಒಲವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಭೀಮಶೀ ಜಾರಕಿಹೊಳಿ ಅವರ ಅಭಿಮಾನಿಗಳು ಭೀಮಶಿ ಜಾರಕಿಹೊಳಿ ಅವರು ಮುಂದಿನ ಎಂಪಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಶುರು ಮಾಡಿಕೊಂಡಿದ್ದು,ನಮ್ಮ ಕುಟುಂಬದಲ್ಲಿ ಈಗಾಗಲೇ ನಾಲ್ಕು ಜನ ಸಹೋದರರು ಜನಪ್ರತಿನಿಧಿಗಳಾಗಿದ್ದು ನಾನು ಚುನಾವಣೆಗೆ ಸ್ಪರ್ಧೆ ಮಾಡೋಲ್ಲ ಎಂದು ಭೀಮಶಿ ಜಾರಕಿಹೊಳಿ ಅವರು ಇತ್ತೀಚಿಗಷ್ಟೆ ಮಾದ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಮಾಜಿ ಶಾಸಕ ಶ್ಯಾಮ ಘಾಟಗೆ,ಸೇರಿಂದತೆ ಹಲವಾರು ಜನ ಕಾಂಗ್ರೆಸ್ ನಾಯಕರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನ ನಡೆಸಿರುವುದು ಸತ್ಯ.